ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕ್ಷಮತೆ ಹೆಚ್ಚಿಸಲಿದೆ

ಅಕ್ಷರ ಗಾತ್ರ

ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮಕ್ಕಳ ಹಾಜರಾತಿಗೆ ಬಯೊಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸುವುದಾಗಿ ಸರ್ಕಾರ ಘೋಷಿಸಿದೆ. ಇದೊಂದು ಶ್ಲಾಘನೀಯ ನಿರ್ಧಾರ. ಬಯೊಮೆಟ್ರಿಕ್ ವ್ಯವಸ್ಥೆಯಿಂದ ಶಾಲೆಗಳಲ್ಲಿ ಮಕ್ಕಳ ನಿಖರ ದಾಖಲಾತಿ ಸಿಗುವುದರ ಜೊತೆಗೆ ದ್ವಿದಾಖಲಾತಿ ಹಾಗೂ ಗೈರುಹಾಜರಿ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಗಲಿದೆ.

ಅಲ್ಲದೇ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಸಮವಸ್ತ್ರ, ಶೂ, ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ಯೋಜನೆಗಳಲ್ಲಿ ಹಣ ಪೋಲಾಗುವುದು ತಪ್ಪುತ್ತದೆ. ಅರ್ಹ ವಿದ್ಯಾರ್ಥಿಗಳಷ್ಟೇ ಫಲಾನುಭವಿಗಳಾಗುವುದರಿಂದ ಸರ್ಕಾರಕ್ಕೆ ಅಪಾರ ಹಣ ಉಳಿತಾಯವಾಗಲಿದೆ. ಸಮಯ ಪಾಲನೆ ಅನಿವಾರ್ಯ ಆಗಲಿದೆ. ಶಿಕ್ಷಕರ ಗೈರುಹಾಜರಿಗೂ ಕಡಿವಾಣ ಬೀಳಲಿದೆ. ಶಿಕ್ಷಣ ಇಲಾಖೆಯ ಕಾರ್ಯದಕ್ಷತೆ ಹೆಚ್ಚಿಸುವಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಲಿದೆ.

ಮಾಗಣಗೇರಾ, ಯಡ್ರಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT