ಶುಕ್ರವಾರ, ಸೆಪ್ಟೆಂಬರ್ 25, 2020
25 °C

ವಾಚಕರ ವಾಣಿ | ತಮ್ಮದಲ್ಲದ ಕ್ಷೇತ್ರದಲ್ಲಿ ಮೂಗು ತೂರಿಸುವವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಪದಚ್ಯುತಗೊಳಿಸಲು ನಡೆಯುತ್ತಿರುವ ಷಡ್ಯಂತ್ರಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕೆಲ ಮಠಾಧೀಶರು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇದು ತಮ್ಮದಲ್ಲದ ಕ್ಷೇತ್ರದಲ್ಲಿ ಮೂಗು ತೂರಿಸುವ ಕೆಲಸ.  ಸ್ವಾಮೀಜಿ ಅಥವಾ ರಾಜಕೀಯ ಧುರೀಣರನ್ನು ಜಾತಿ–ಮತಗಳ ಮಿತಿಗೆ ಒಳಪಡಿಸದೆ ಒಪ್ಪಿಕೊಳ್ಳುವ ಕಾಲ ಒಂದಿತ್ತು. ಇನ್ನೂ ಸ್ವಲ್ಪಮಟ್ಟಿಗೆ ಉಳಿದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅದಕ್ಕೆ ಭಂಗ ತರುವ ಹಾಗೂ ಜನರ ದಾರಿ ತಪ್ಪಿಸುವ ಕೆಲಸ ಈ ಎರಡೂ ವರ್ಗಗಳಿಂದ ನಡೆಯುತ್ತಿದೆ. ಇದು, ಸರಿಯಲ್ಲ.

ಯಡಿಯೂರಪ್ಪ ಅವರು ಜಾತಿ–ಮತಗಳಿಗೆ ಅತೀತವಾಗಿ ಜನ ಒಪ್ಪಿಕೊಳ್ಳುವ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ. ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಕೆಲಸ ಮಠಾಧೀಶರಿಂದಲೇ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ. ಸಮಾಜದ ಎಲ್ಲ ಜಾತಿ, ಸಮುದಾಯಗಳಿಗೆ ದಾರಿದೀಪವಾಗಿ ಸಮಷ್ಟಿ ಪ್ರಜ್ಞೆ ಮೆರೆಯಬೇಕಾದ ಸ್ವಾಮಿಗಳೇ ಹೀಗೆ ಮಾಡುವುದು ಸಮಂಜಸವಲ್ಲ.

-ನಾರಾಯಣರಾವ ಕುಲಕರ್ಣಿ, ಹಿರೇಅರಳಿಹಳ್ಳಿ, ಯಲಬುರ್ಗಾ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು