ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಬಹಿಷ್ಕಾರ: ತಹಸೀಲ್ದಾರ್ ಗೆ ಘೇರಾವ್

Last Updated 12 ಮೇ 2018, 6:56 IST
ಅಕ್ಷರ ಗಾತ್ರ

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಕೃಷ್ಣಾ ನದಿ ನಡುಗಡ್ಡೆ ಕಡದರಗಡ್ಡೆಯಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ತಹಸೀಲ್ದಾರ್ ಭಾಗವಾನ್ ಅವರು ಮನವೊಲಿಸುವುದಕ್ಕೆ ಶನಿವಾರ ಸ್ಥಳಕ್ಕೆ ಹೋಗಿದ್ದರು.

ತಹಸೀಲ್ದಾರ್  ಒತ್ತಾಯಕ್ಕೆ ಮಣಿದು ಗ್ರಾಮ ಪಂಚಾಯಿತಿಯ ಮೂವರು ಸಿಬ್ಬಂದಿ ಮತದಾನ ಮಾಡಿದ್ದಾರೆ. 

ಇದರಿಂದ ಗ್ರಾಮಸ್ಥರು ರೊಚ್ಚಿಗೆದ್ದು ಬೆಳಿಗ್ಗೆ 9  ರಿಂದ ತಹಸೀಲ್ದಾರ್ ಅವರಿಗೆ ಘೇರಾವ್ ಹಾಕಿದ್ದಾರೆ. ಮಧ್ಯಾಹ್ನ 12 ಗಂಟೆಯಾದರೂ ಅದೇ ಪರಿಸ್ಥಿತಿ ಮುಂದುವರಿದಿದೆ. 

ರಸ್ತೆಗೆ ಮುಳ್ಳಿನ ಬೇಲಿ ಹಾಕಿ, ಸಂಚಾರ ಸ್ಥಗಿತಗೊಳಿಸಿದ್ದಾರೆ. ಗ್ರಾಮಸ್ಥರ ನಿರ್ಧಾರದ ವಿರುದ್ಧ ಹೇಗೆ ಮತದಾನ ಮಾಡಿಸಿದ್ದೀರಿ? ನದಿಗೆ ಸೇತುವೆ ನಿರ್ಮಾಣದ ಬೇಡಿಕೆ ಬಗ್ಗೆ ಅನೇಕ ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಜನರು ವಾಗ್ವಾದ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT