ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಿದ್ದ ಅಮೂಲ್ಯ ಲಿಯೋನ್ ಎಂಬ ಯುವತಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾಳೆ. ಇಂತಹ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು.