ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷ ಉರುಳಿದರೂ ಕ್ಯಾಂಟೀನ್ ಬರಲಿಲ್ಲ!

Last Updated 1 ನವೆಂಬರ್ 2018, 17:16 IST
ಅಕ್ಷರ ಗಾತ್ರ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ‘ಹಸಿವು ಮುಕ್ತ ಕರ್ನಾಟಕ’ ನಿರ್ಮಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಮುಂದಾಯಿತು.

ಯೋಜನೆ ಜಾರಿಯಾಗಿ ಎರಡು ವರ್ಷಗಳೇ ಕಳೆದರೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇನ್ನೂ ಕ್ಯಾಂಟೀನ್‌ಗಳು ಪ್ರಾರಂಭವಾಗಿಲ್ಲ. ವಿಜಯಪುರ ಜಿಲ್ಲೆಗೆ ಒಟ್ಟು ಏಳು ಕ್ಯಾಂಟೀನ್‌ಗಳು ಮಂಜೂರಾಗಿವೆ. ಅದರಲ್ಲಿ ಕೆಲವು ಕಡೆ ಕಟ್ಟಡಗಳು ಪೂರ್ಣಗೊಂಡಿದ್ದರೂ ಕ್ಯಾಂಟೀನ್ ಕಾರ್ಯಾರಂಭ ಮಾಡಿಲ್ಲ. ಹೊಸ ಸರ್ಕಾರವು ಹಳೆಯ ಯೋಜನೆಯನ್ನು ಮರೆತುಬಿಟ್ಟಿತೇ?

ಕಾಂಗ್ರೆಸ್‌ ಮುಖಂಡರು ಹೆಚ್ಚು ಆಸಕ್ತಿ ವಹಿಸಿ ಉತ್ತರ ಕರ್ನಾಟಕದಲ್ಲೂ ಕ್ಯಾಂಟೀನ್‌ಗಳು ಕಾರ್ಯಾರಂಭ ಆಗು
ವಂತೆ ಮಾಡಬೇಕು. ಇದರಿಂದ ಈ ಭಾಗದ ಬಡವರು, ನಿರ್ಗತಿಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.

ಲಕ್ಷ್ಮಿ ಪುತ್ರ ಬಮ್ಮನಳ್ಳಿ, ವಿಜಯಪುರ

***

ಕುಬ್ಜಗೊಳಿಸಿದ್ದು ಸರಿಯಲ್ಲ

ಮಹಾನ್ ದೇಶಪ್ರೇಮಿ, ಉಕ್ಕಿನ ಮನುಷ್ಯರೆಂದೇ ಖ್ಯಾತರಾಗಿದ್ದ ಸರ್ದಾರ್‌ ವಲ್ಲಭಭಾಯ್‌ ಪಟೇಲರ ಉಕ್ಕಿನ ಪ್ರತಿಮೆಯು ವಿಶ್ವದಲ್ಲಿಯೇ ಎತ್ತರದ್ದು ಎಂಬುದು ಸಂತಸದ ವಿಷಯ. ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರೀಯ ಏಕತಾ ದಿನ’ವೆಂದು ಘೋಷಿಸಿ ಪ್ರತಿಮೆ ಅನಾವರಣದ ಕಾರ್ಯಕ್ರಮವನ್ನು ಬಿಜೆಪಿಯ ಸಮಾರಂಭವನ್ನಾಗಿ ಮಾಡಿ, ಪಟೇಲರ ವ್ಯಕ್ತಿತ್ವವನ್ನು ಕುಬ್ಜಗೊಳಿಸಿದ್ದು ಸರಿಯಲ್ಲ.

ಪ್ರೊ. ಎಸ್.ವಿ. ಪಟ್ಟಣಶೆಟ್ಟಿ, ಹುಬ್ಬಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT