ಮಂಗಳವಾರ, ಸೆಪ್ಟೆಂಬರ್ 21, 2021
26 °C

ಪ್ರೇಮ ನಿವೇದನೆ ತಪ್ಪಲ್ಲ, ಆದರೆ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಗಾಯಕ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಸ್ಪರ್ಧಿಯಾಗಿದ್ದ ನಿವೇದಿತಾ ಗೌಡ ಅವರಲ್ಲಿ ಸಾರ್ವಜನಿಕರ ಎದುರೇ ಪ್ರೇಮ ನಿವೇದನೆ ಮಾಡಿ, ಸರ್ಕಾರಿ ಪ್ರಾಯೋಜಕತ್ವದ ಕಾರ್ಯಕ್ರಮದ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ಸರಿ? ಇದರಿಂದ ಮುಜುಗರ ಉಂಟಾಗಿದೆ. ಇದಕ್ಕೆ ಕಾರ್ಯಕ್ರಮದ ಆಯೋಜಕರನ್ನೇ ನೇರ ಹೊಣೆ ಮಾಡಬೇಕು.

ಯುವ ದಸರಾಗೆ ತನ್ನದೇ ಆದ ಘನತೆ ಇದೆ. ಯಾವ ಜಾಗದಲ್ಲಿ ಏನು ಮಾಡಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದವರಿಗೆ ಇಂತಹ ಕಾರ್ಯಕ್ರಮಗಳಿಗೆ ಆಹ್ವಾನವೇಕೆ? ಪ್ರೇಮ ನಿವೇದನೆ ತಪ್ಪಲ್ಲ. ಆದರೆ ಅದಕ್ಕೆ ಅದರದೇ ಆದ ಸಮಯ, ಸಂದರ್ಭ ಮತ್ತು ಸ್ಥಳಗಳಿರುತ್ತವೆ. ಮುಂದೆ ಇಂತಹ ಅಚಾತುರ್ಯಗಳು ನಡೆಯದಂತೆ ನೋಡಿಕೊಳ್ಳಬೇಕು.

–ಮುರುಗೇಶ ಡಿ., ದಾವಣಗೆರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು