ಕಾಮಗಾರಿಯ ಬಿಲ್ ಬಿಡುಗಡೆಗೆ ಸಂಬಂಧಿಸಿದ ಚರ್ಚೆಗಾಗಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಳ್ಳದ ಕಾರಣಕ್ಕೆ ಮುಖ್ಯ ಎಂಜಿನಿಯರ್ ಒಬ್ಬರನ್ನು ದೇವದುರ್ಗದ ಶಾಸಕ ಕೆ.ಶಿವನಗೌಡ ನಾಯಕ ಅವರು 7 ತಿಂಗಳ ಹಿಂದೆ ಅವಾಚ್ಯವಾಗಿ ನಿಂದಿಸಿದ್ದರು ಎನ್ನಲಾದ ವಿಡಿಯೊವೊಂದು ಈಗ ವೈರಲ್ ಆಗಿದೆ. ಶಾಸಕರು ಅಧಿಕಾರಿಯನ್ನು ಹೀಗೆ ಅವಮಾನಿಸಿ ಕಾರ್ಯಾಂಗ ವ್ಯವಸ್ಥೆಯನ್ನೇ ನಗೆಪಾಟಲಿಗೆ ಈಡುಮಾಡಿದ್ದಾರೆ.

ಜನಪ್ರತಿನಿಧಿಗಳು ದೇವರ ಪ್ರತಿನಿಧಿಗಳೇನಲ್ಲ. ಸರ್ಕಾರಿ ನೌಕರರು ಅವರ ಮನೆಯ ಜೀತದಾಳುಗಳಲ್ಲ. ಅವರಿಗೂ ಹುದ್ದೆಗೆ ಅನುಗುಣವಾಗಿ ಸಮಾಜದಲ್ಲಿ ಗೌರವ ಇರುತ್ತದೆ. ಸಾರ್ವಜನಿಕರ ಸಮ್ಮುಖದಲ್ಲಿ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದಾಕ್ಷಣ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಬಿಡುವುದಿಲ್ಲ.

-ವಿ.ಜಿ.ಇನಾಮದಾರ, ಸಾರವಾಡ, ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.