ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ತಡೆ ಸಾಧ್ಯವಿರಲಿಲ್ಲವೇ?

ಅಕ್ಷರ ಗಾತ್ರ

ಮುಳಬಾಗಿಲು ತಾಲ್ಲೂಕಿನಲ್ಲಿ ಒಂದೇ ಮುಹೂರ್ತದಲ್ಲಿ ಅಕ್ಕ-ತಂಗಿಯರನ್ನು ವರಿಸಿದ್ದ ವರ ಹಾಗೂ ಪೋಷಕರ ವಿರುದ್ಧ ಪೊಲೀಸರಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ (ಪ್ರ.ವಾ., ಮೇ 17). ಇದು ಕಾನೂನಿನ ದೃಷ್ಟಿಯಲ್ಲಿ ಸರಿಯಾದ ಕ್ರಮ. ಆದರೆ, ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ವಿತರಣೆ ಮಾಡಿ ಬಹಿರಂಗವಾಗಿಯೇ ನಡೆದಿರುವ ಈ ಬಾಲ್ಯವಿವಾಹವನ್ನು ಮುಂಚಿತವಾಗಿಯೇ ತಡೆಯಲು ಸಾಧ್ಯವಿರಲಿಲ್ಲವೇ?

ಇಂಥ ಮದುವೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶದಲ್ಲಿ ವಾಸಿಸುವ ಪ್ರಜ್ಞಾವಂತ ನಾಗರಿಕರು, ಗ್ರಾಮ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ವಲ್ಪ ಎಚ್ಚರ ವಹಿಸಿದ್ದರೆ ಈ ಕಾರ್ಯ ಸಾಧ್ಯವಿತ್ತು. ಪ್ರತಿಯೊಂದು ಮದುವೆಯ ವರ ಮತ್ತು ವಧುವಿನ ವಯಸ್ಸಿನ ದಾಖಲೆಗಳನ್ನು ಪರಿಶೀಲಿಸುವ ಮೂಲಕ, ಸ್ಥಳೀಯ ಆಡಳಿತದಿಂದ ಪ್ರಮಾಣಪತ್ರ ಪಡೆಯುವುದನ್ನು ಕಡ್ಡಾಯ ಮಾಡಲು ಸಾಧ್ಯವಾದರೆ ಬಾಲ್ಯವಿವಾಹಗಳನ್ನು ತಡೆಗಟ್ಟಬಹುದು.

– ಡಾ. ಜಿ.ಬೈರೇಗೌಡ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT