ಸೋಮವಾರ, ಏಪ್ರಿಲ್ 6, 2020
19 °C

ಜ್ವಲಂತ ಸಮಸ್ಯೆಗಳ ನಿವಾರಣೆಗೆ ಗಮನ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾನೊಬ್ಬ ಭಾರತೀಯ ಮುಸಲ್ಮಾನ. ನಾನೊಬ್ಬ ದೇಶಪ್ರೇಮಿ. ಆದರೆ, ನಮ್ಮ ಇಡೀ ಸಮುದಾಯವನ್ನು ಯಾವುದೋ ನೆಪದಡಿ ಸಾಮಾನ್ಯೀಕರಿಸಿ ಪಾಕಿಸ್ತಾನಪರ ಎಂಬರ್ಥದಲ್ಲಿ ಕೆಲವರು ಮಾತನಾಡಿದಾಗ ನನಗೆ ತುಂಬಾ ದುಃಖ ಹಾಗೂ ನೋವಾಗುತ್ತದೆ. ಭಾರತದ ಸ್ವಾತಂತ್ರ್ಯಕ್ಕಾಗಿ ಮುಸಲ್ಮಾನರು ತಮ್ಮ ಜೀವನವನ್ನೇ ಬಲಿ ಕೊಟ್ಟಿದ್ದಾರೆ. ಇದಕ್ಕೆ ಇತಿಹಾಸವೇ ಸಾಕ್ಷಿ.

ಪೌರತ್ವ ತಿದ್ದುಪಡಿ ಕಾಯ್ದೆಯ ಹಿನ್ನೆಲೆಯಲ್ಲಿ ಸೌಹಾರ್ದಕ್ಕೆ ಧಕ್ಕೆ ಉಂಟಾದರೆ ಅದಕ್ಕೆ ಸರ್ಕಾರವೇ ಹೊಣೆ. ಜನರನ್ನು ಕಾಡುತ್ತಿರುವ ಸಮಸ್ಯೆಗಳ ನಿವಾರಣೆಯತ್ತ ಸರ್ಕಾರ ಮೊದಲು ಗಮನಹರಿಸಲಿ. ನಿರುದ್ಯೋಗ ನಿವಾರಣೆಗೆ, ಕುಡಿಯುವ ನೀರು ಪೂರೈಕೆಗೆ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಜರುಗಿಸಲಿ.

–ಇ.ಎಂ. ಖಾನ್‌, ಬೆಂಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು