ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಪತ್ರಿಕೆಗಳ ಮಹತ್ವ ಅರಿವಾಗಲಿ

Last Updated 5 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಹೆಚ್ಚಿನ ಅಭ್ಯರ್ಥಿಗಳು ದಿನಪತ್ರಿಕೆಯ ಓದು ತಮ್ಮ ನೆರವಿಗೆ ಬಂದಿತು, ತಮ್ಮ ಯಶಸ್ಸಿನಲ್ಲಿ ಅದರ ಪಾತ್ರ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಇದು, ಪತ್ರಿಕೆಗಳಿಗೆ ಇರುವ ಮೌಲ್ಯವನ್ನು ತಿಳಿಸುತ್ತದೆ. ಅಲ್ಲದೆ ವಿದ್ಯಾರ್ಥಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪತ್ರಿಕೆಗಳ ಪಾತ್ರದ ಬಗ್ಗೆಯೂ ಬೆಳಕು ಚೆಲ್ಲುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನವನ್ನು ಪಡೆದು ಗುರಿ ಮುಟ್ಟಲು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಜರುಗುವ ಕಾಲಕಾಲದ ವಿದ್ಯಮಾನಗಳ ಅರಿವಿಗಾಗಿ ದಿನಪತ್ರಿಕೆಗಳ ಓದು ಬಹಳ ಮುಖ್ಯ ಎಂಬುದು ಇದರಿಂದ ತಿಳಿಯುತ್ತದೆ. ಎಲ್ಲ ಪೋಷಕರೂ ಬಾಲ್ಯದಿಂದಲೇ ಮಕ್ಕಳಲ್ಲಿ ಪತ್ರಿಕೆಯನ್ನು ಓದುವ ಅಭ್ಯಾಸವನ್ನು ಪ್ರೇರೇಪಿಸುವುದು ಅವರ ಭವಿಷ್ಯದ ವಿಕಾಸಕ್ಕಷ್ಟೇ ಅಲ್ಲ, ಸದೃಢ ಸಮಾಜದ ನಿರ್ಮಾಣಕ್ಕೂ ಸಹಕಾರಿ.

-ಚಂದ್ರಶೇಖರ ಪುಟ್ಟಪ್ಪ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT