ಭಾವನೆ ಅರ್ಥ ಮಾಡಿಕೊಳ್ಳಿ

7

ಭಾವನೆ ಅರ್ಥ ಮಾಡಿಕೊಳ್ಳಿ

Published:
Updated:

ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಬರೀ ಏಳು ತಿಂಗಳು ಕಳೆದಿವೆ. ಸಾಗಬೇಕಾದ ಹಾದಿ ಬಹಳ ಇದೆ. ಚುನಾವಣಾ ಪೂರ್ವದಲ್ಲಿ ಪರಸ್ಪರ ತೀವ್ರವಾದ ಟೀಕೆಗಳನ್ನು ಮಾಡಿಕೊಂಡಿದ್ದ ಈ ಪಕ್ಷಗಳ ಮುಖಂಡರು ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಗೆಳೆತನವನ್ನು ಪ್ರದರ್ಶಿಸಿದರು.

ಜನರು ಸಹ ಸರ್ಕಾರದ ಮೇಲೆ ವಿಶ್ವಾಸ ಇರಿಸಿದ್ದಾರೆ. ಆದರೆ ಇತ್ತೀಚೆಗೆ ಎರಡೂ ಪಕ್ಷಗಳ ನಾಯಕರು ಸಣ್ಣಪುಟ್ಟ ಕಾರಣಕ್ಕೂ ಪರಸ್ಪರ ದೋಷಾರೋಪಣೆ ಮಾಡುತ್ತಾ ಕೆಸರು ಎರಚಾಟದಲ್ಲಿ ತೊಡಗಿದ್ದಾರೆ. ಇದರಿಂದ ಜನರು ಆಘಾತಕ್ಕೊಳಗಾಗಿದ್ದಾರೆ. ಸರ್ಕಾರದ ಕಚೇರಿಗಳಲ್ಲಿ ಜನರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ಹೇಳುವವರು ಕೇಳುವವರು ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಮುಖಂಡರು ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸರ್ಕಾರ ರಚನೆಯಾದ ಸಂದರ್ಭದಲ್ಲಿ ಇದ್ದ ಮನಃಸ್ಥಿತಿಯನ್ನು ಪ್ರದರ್ಶಿಸಬೇಕು. ಉತ್ತಮ ಆಡಳಿತ ನೀಡುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !