ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಜನನಾಯಕರ ಬಾಲಿಶ ವರ್ತನೆ

ಅಕ್ಷರ ಗಾತ್ರ

ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷ ಮಾಡಬೇಕಾದ ಕೆಲಸ ಬಹಳಷ್ಟಿರುತ್ತದೆ. ಆದರೆ ಅದನ್ನು ಮರೆತು ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿರುವುದು ಸರಿಯಲ್ಲ. ಈ ಕುರಿತು ಪಕ್ಷದ ಮುಖಂಡ ಸಿದ್ದರಾಮಯ್ಯ, ಶಾಸಕರು ತಮ್ಮ ಪರವಾಗಿ ನೀಡಿರುವ ಹೇಳಿಕೆಗೂ ತಮಗೂ ಸಂಬಂಧವಿಲ್ಲ ಎಂದಿದ್ದಾರೆ. ಈ ಕುರಿತು ಶಾಸಕಾಂಗ ಪಕ್ಷದ ನಾಯಕರು ಗಮನ ಹರಿಸುತ್ತಾರೆ ಎಂದು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆ ಇತ್ತಿದ್ದಾರೆ. ನಾಯಕರಲ್ಲಿ ಒಗ್ಗಟ್ಟಿಲ್ಲ ಎನ್ನುವುದು ಇದರಿಂದ ತಿಳಿಯುತ್ತದೆ.

ಪ್ರಸ್ತುತ ಸಂದರ್ಭದಲ್ಲಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸರಿಯಾಗಿ ವಿತರಣೆಯಾಗುತ್ತಿಲ್ಲ, ಕೂಲಿಕಾರ್ಮಿಕರ ಪರಿಸ್ಥಿತಿ ಅಧೋಗತಿಗಿಳಿದಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದೆ. ಇಂತಹ ಸಮಸ್ಯೆಗಳತ್ತ ಗಮನಹರಿಸುವುದು ಬಿಟ್ಟು, ಆಡಳಿತ ಪಕ್ಷದವರು ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ, ಹಾಗೆಯೇ ವಿರೋಧ ಪಕ್ಷದವರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತೆ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅನಗತ್ಯ ಗದ್ದಲ ಎಬ್ಬಿಸುತ್ತಿರುವುದು ದುರದೃಷ್ಟಕರ. ಈ ಕುರಿತು ಎರಡೂ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಲಿ. ಇದು ರಾಜಕಾರಣ ಮಾಡುವ ಸಮಯವಲ್ಲ ಎಂಬುದನ್ನು ಅರಿತು, ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಎಲ್ಲರೂ ಪಕ್ಷಭೇದ ಮರೆತು ಶ್ರಮಿಸಲಿ.

- ಭೀಮಾಶಂಕರ ದಾದೆಲಿ ಹಳಿಸಗರ,ಶಹಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT