ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಕೊರೊನಾ ಸೋಂಕು: ಜವಾಬ್ದಾರಿ ಅರಿತು ವರ್ತಿಸೋಣ

Last Updated 17 ಜುಲೈ 2020, 19:45 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಬೆಂಗಳೂರಿನಲ್ಲಿ ದಿನಕ್ಕೆ ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ, ಎಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆಯೋ ಅಂತಹ ಜಿಲ್ಲೆಗಳಲ್ಲಿ ಸರ್ಕಾರ ಲಾಕ್‍ಡೌನ್ ವಿಧಿಸಿದೆ.

ಆದರೂ ಜನ ಯಾವುದಕ್ಕೂ ಹೆದರದೆ, ಅಂತರ ಕಾಯ್ದುಕೊಳ್ಳದೆ ಗುಂಪಾಗಿ ಸೇರುವ ಮೂಲಕ ನಿಯಮಗಳನ್ನು ಉಲ್ಲಂಘಿಸಿ, ಸೋಂಕು ಹರಡಲು ಕಾರಣರಾಗುತ್ತಿದ್ದಾರೆ. ಪರಿಣಾಮವಾಗಿ ಕೊರೊನಾ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ವಾರ್ಡ್‍ಗಳು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಅಲ್ಲದೆ ಹೋಮ್ ಕ್ವಾರಂಟೈನ್‍ನಲ್ಲಿ ಇರಬೇಕಾಗಿದ್ದವರು ಕೂಡ ಮನೆಯಿಂದ ಹೊರಗಡೆ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದಾರೆ. ಇದು ಸರಿಯಲ್ಲ. ಜನ, ಸಾಮಾಜಿಕ ಜವಾಬ್ದಾರಿ ಅರಿತು ನಡೆಯಬೇಕು. ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ, ಸೋಂಕು ನಿವಾರಣೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.
–ತ್ಯಾಗರಾಜ್ ಸಿ.,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT