ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಲಾಯುಗದ ಬದುಕು ನೆನಪಾಯಿತು

Last Updated 26 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ಕಳೆದ ವರ್ಷದ ಅತಿವೃಷ್ಟಿಯ ಸಂತ್ರಸ್ತರಿಗೆ ಸರ್ಕಾರ ಯಾವ ರೀತಿ ಸ್ಪಂದಿಸಿದೆ ಎಂಬುದನ್ನು ಮೂಡಿಗೆರೆ ತಾಲ್ಲೂಕಿನ ಕಳಸ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೆರೆ ಗ್ರಾಮದ ಗಿರಿಜನ ಕುಟುಂಬದ ಕತೆಯು ಅನಾವರಣಗೊಳಿಸಿದೆ. ಮಳೆಯಿಂದ ಮನೆ ಕಳೆದುಕೊಂಡ ಈ ಕುಟುಂಬವು ಸಮೀಪದ ಕಲ್ಲಿನ ಗುಹೆಯಲ್ಲಿ ಆಶ್ರಯ ಪಡೆದಿದ್ದುದು, ವಿದ್ಯಾರ್ಥಿ ದೆಸೆಯಲ್ಲಿ ಓದಿದ ಶಿಲಾಯುಗದ ನಾಗರಿಕತೆಯನ್ನು ನೆನಪಿಸಿತು.

ಇದು, ಸಂತ್ರಸ್ತರ ಪುನರ್ವಸತಿಯ ವಸ್ತುಸ್ಥಿತಿಗೆ ಸಾಂಕೇತಿಕ ನಿದರ್ಶನವಷ್ಟೇ. ಇವರ ನೆರವಿಗಾಗಿ ಬಿಡುಗಡೆಯಾದ ಸಾವಿರಾರು ಕೋಟಿ ರೂಪಾಯಿ, ನೊಂದ ಜನರಿಗೆ ಎಷ್ಟರಮಟ್ಟಿಗೆ ತಲುಪಿದೆ ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿಯುವಂತಿದೆ.

-ಯಲುವಹಳ್ಳಿ ಸೊಣ್ಣೇಗೌಡ, ಚಿಕ್ಕಬಳ್ಳಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT