ಗುರುವಾರ , ಜೂನ್ 17, 2021
22 °C

ವಾಚಕರ ವಾಣಿ: ಕೋವಿಡ್ ನಿಯಮ; ಸಚಿವರೂ ಪಾಲಿಸಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಮೂಹಿಕವಾಗಿ ಆಚರಿಸುವ ಉತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ ರೋಗ ನಿಯಂತ್ರಣದ ಸಲುವಾಗಿ ರಾಜ್ಯ ಸರ್ಕಾರವು ಹಲವು ನಿರ್ಬಂಧಗಳನ್ನು ವಿಧಿಸಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇವುಗಳನ್ನು ಪಾಲಿಸುವುದು ಎಲ್ಲರ ಕರ್ತವ್ಯವೂ ಹೌದು. ಆದರೆ ಈ ನಿಯಮವನ್ನು ಸರ್ಕಾರದ ಭಾಗವಾಗಿರುವ ಜನಪ್ರತಿನಿಧಿಗಳು, ಅಧಿಕಾರಿಗಳೇ ಉಲ್ಲಂಘಿಸುತ್ತಿರುವುದು ವಿಪರ್ಯಾಸ.

ಈಗ ಸರ್ಕಾರಿ ಸಭೆ, ಸಮಾರಂಭಗಳು ಯಥಾರೀತಿಯಲ್ಲಿ ನಡೆಯುತ್ತಿದ್ದು ಶಾಸಕರು, ಸಂಸದರು, ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಇಲ್ಲಿ ವ್ಯಕ್ತಿಗತ ಅಂತರ ಮಾಯವಾಗಿ ಆಯಾ ಪಕ್ಷದ ಕಾರ್ಯಕರ್ತರು, ಮುಖಂಡರು, ಜನಸಾಮಾನ್ಯರು ನೂರಾರು ಸಂಖ್ಯೆಯಲ್ಲಿ ಗುಂಪುಗೂಡುವುದು ಸಾಮಾನ್ಯ ಸಂಗತಿ.

ಸರ್ಕಾರ ರೂಪಿಸಿರುವ ನಿಯಮಗಳನ್ನು ತಾವು ಮೊದಲು ಅನುಸರಿಸುವ ಮೂಲಕ ಜನಪ್ರತಿನಿಧಿಗಳು ಜನರಿಗೆ ಮಾದರಿಯಾಗಬೇಕಲ್ಲವೇ?
-ನಾರಾಯಣರಾವ ಕುಲಕರ್ಣಿ, ಹಿರೇಅರಳಿಹಳ್ಳಿ, ಯಲಬುರ್ಗಾ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು