ಮಂಗಳವಾರ, ನವೆಂಬರ್ 24, 2020
22 °C

ವಾಚಕರ ವಾಣಿ: ಗೆಲುವು ಮೈಮರೆಸದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಸಂಕಷ್ಟದ ಈ ಪರಿಸ್ಥಿತಿಯಲ್ಲಿ ಕೆಲವು ಅಡೆತಡೆಗಳ ನಡುವೆಯೂ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ ಚುನಾವಣಾ ಆಯೋಗ ಮತ್ತು ಮತದಾರರು ಅಭಿನಂದನಾರ್ಹರು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ದೊರೆತಿರುವ ಗೆಲುವು ಆಡಳಿತ ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಿದೆ ಮತ್ತು ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಿದೆ. ಆದರೆ ಈ ಗೆಲುವು ಆಡಳಿತ ಪಕ್ಷದ ಮೈಮರೆವಿಗೆ ಕಾರಣವಾಗದೆ, ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿ, ಕೈಗಾರಿಕಾ ವಲಯವನ್ನು ಉನ್ನತೀಕರಿಸುವುದು, ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವುದು ಮತ್ತು ಪ್ರವಾಹದಿಂದ ಉಂಟಾದ ಹಾನಿಯ ನಷ್ಟ ಭರಿಸುವಂತಹ ಸವಾಲುಗಳನ್ನು ಎದುರಿಸಬೇಕಾಗಿದೆ. ಆಡಳಿತದ ಅಗತ್ಯಕ್ಕೆ ಅನುಗುಣವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಬೇಕಿದೆ.

–ರಾಕೇಶ ಆಲಬಾಳ, ದರೂರ, ಅಥಣಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು