ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಹೂಳೆತ್ತುವುದರಿಂದ ನಾನಾ ಲಾಭ

Last Updated 1 ಏಪ್ರಿಲ್ 2021, 17:39 IST
ಅಕ್ಷರ ಗಾತ್ರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇತ್ತೀಚೆಗೆ ಕೆರೆಗಳ ಹೂಳೆತ್ತಲು ಮುಂದಾಗುತ್ತಿರುವುದು ಸ್ವಾಗತಾರ್ಹ ಕ್ರಮ. ಕೆರೆಗಳು ಬೇಸಿಗೆಯಲ್ಲಿ ಬತ್ತಿ ಹೋಗಿ ಪಶು-ಪಕ್ಷಿಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವುದು ಸರ್ವೇ ಸಾಮಾನ್ಯ. ಬೇಸಿಗೆಯಲ್ಲಿ ಬತ್ತಿ ಹೋಗುವುದನ್ನು ತಪ್ಪಿಸಲು ಕೆರೆ ತುಂಬಿಸುವ ಯೋಜನೆ ತುಂಬಾ ಅನುಕೂಲಕರವಾಗಿದೆ. ಇದರಿಂದ ಕೆರೆಯ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಿದಂತಾಗುತ್ತದೆ. ಬೋರ್‌ವೆಲ್‌ಗಳ ಮರುಪೂರಣ ಆಗುತ್ತದೆ. ಪಶು-ಪಕ್ಷಿಗಳ ದಾಹ ತಣಿಸಬಹುದು. ಗಿಡ-ಮರಗಳು ಬೆಳೆದು ಹಚ್ಚ ಹಸಿರಿನ ವಾತಾವರಣ ನಿರ್ಮಾಣವಾಗುವುದರ ಜೊತೆಗೆ ಮೀನುಗಾರಿಕೆಗೂ ಸಹಕಾರಿ.

ಶ್ರೀಧರ ಎಸ್. ವಾಣಿ, ಕಲ್ಲತಾವರಗೇರಿ, ಕೊಪ್ಪಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT