ಭಾನುವಾರ, ಅಕ್ಟೋಬರ್ 25, 2020
28 °C

ಅಕ್ರಮಕ್ಕೆ ಬೀಳಲಿ ಕಡಿವಾಣ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

‘ಡಿಜಿಟಲ್ ಚುನಾವಣೆ’ಗೆ ಸಕಾಲ ಎಂಬ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಲೇಖನ (ಸಂಗತ, ಅ. 8) ಉತ್ತಮ ಚಿಂತನೆಗಳಿಂದ ಕೂಡಿದೆ. ಕಟ್ಟುನಿಟ್ಟಿನ ಕಾನೂನುಗಳು ಜಾರಿಯಲ್ಲಿದ್ದರೂ ಚುನಾವಣಾ ಅಕ್ರಮಗಳಿಗೆ ಕಡಿವಾಣ ಬೀಳುತ್ತಿಲ್ಲ. ಚುನಾವಣೆಯಿಂದ ಚುನಾವಣೆಗೆ ನಾನಾ ರೀತಿಯಲ್ಲಿ ಅಕ್ರಮಗಳನ್ನು ನಡೆಸುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರಸ್ತುತ ಡಿಜಿಟಲ್ ಯುಗದಲ್ಲಿಯಾದರೂ ಪಾರದರ್ಶಕವಾಗಿ ಚುನಾವಣೆ ನಡೆಯಬೇಕಾಗಿದೆ. ಅಭ್ಯರ್ಥಿಗಳು ಚುನಾವಣೆ ಸಮಯದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡದೇ ಇದ್ದರೆ ನಂತರ ‘ಗಳಿಕೆ’ ಕಡೆ ಅವರ ಗಮನ ಕಡಿಮೆಯಾಗಬಹುದೇನೊ?!

– ಡಾ. ಸಂಜೀವಕುಮಾರ ಅತಿವಾಳೆ, ಬೀದರ್‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು