ಮಂಗಳವಾರ, ಜೂನ್ 15, 2021
27 °C

ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯ ಸಲ್ಲದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಸ್ಪತ್ರೆಗಳ ವೈದ್ಯಕೀಯ ಸೇವೆಯಲ್ಲಿ ಬೇಜವಾಬ್ದಾರಿತನ ಕಂಡುಬರುತ್ತಿರುವುದು ವಿಷಾದಕರ. ಬೆಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿ ಕೋವಿಡ್‌ನಿಂದ ಮೃತರಾದವರ ಶವಗಳನ್ನು ನಿರ್ಲಕ್ಷ್ಯದಿಂದಾಗಿ ಅದಲು-ಬದಲು ಮಾಡಿಕೊಡುತ್ತಿರುವುದು ನೋವಿನ ಸಂಗತಿ. ಇದರಿಂದ ಮೃತರ ಕುಟುಂಬ ವರ್ಗದವರಿಗೆ ಎಷ್ಟು ನೋವಾಗಬಹುದು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು. ಇಂತಹ ವ್ಯವಸ್ಥೆ ಸರಿಪಡಿಸುವ ಬಗ್ಗೆ ಆಸ್ಪತ್ರೆ ಅಧಿಕಾರಿಗಳು ಗಮನ ಕೊಡಬೇಕು.

ಲಾಕ್‌ಡೌನ್‌ ಹೇರಿದ್ದರೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಂದಿಲ್ಲದೇ ಇರುವುದನ್ನು ಜನ ಗಂಭೀರವಾಗಿ ಪರಿಗಣಿಸಬೇಕು. ಸೋಂಕು ನಿಯಂತ್ರಣಕ್ಕೆ ಪೂರಕವಾಗಿ ಸ್ಪಂದಿಸಬೇಕು. ವೈದ್ಯಕೀಯ ಸೇವೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಅಂತಹ ಆಸ್ಪತ್ರೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಮುಂದೆ ಇಂತಹ ತಪ್ಪುಗಳಾಗದಂತೆ ಕ್ರಮ ಕೈಗೊಳ್ಳುವ ವ್ಯವಸ್ಥೆ ಆಗಬೇಕು. ವೈದ್ಯರು ದೇವರ ಸಮಾನ, ಆಸ್ಪತ್ರೆಯು ದೇವಮಂದಿರ ಇದ್ದಂತೆ ಎಂಬ ಭಾವನೆ ಜನಸಾಮಾನ್ಯರಲ್ಲಿದೆ. ಇದನ್ನು ಅರಿತು ನಡೆದರೆ ಇಂತಹ ನಿರ್ಲಕ್ಷ್ಯದ ಘಟನೆಗಳು ಮರುಕಳಿಸುವುದಿಲ್ಲ.

-ಬಸಪ್ಪ ಸೊ. ಮುಳ್ಳೂರ, ಹಲಗತ್ತಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು