ಶನಿವಾರ, ಅಕ್ಟೋಬರ್ 24, 2020
23 °C

ತಪ್ಪು ಸಂದೇಶ ರವಾನೆಯಾಗದಿರಲಿ

ವಾಚಕರವಾಣಿ Updated:

ಅಕ್ಷರ ಗಾತ್ರ : | |

ಉತ್ತರಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಕೃತ್ಯ ಖಂಡನೀಯ. ಆದರೆ ಇಂತಹ ವಿಚಾರದಲ್ಲೂ ರಾಜಕಾರಣ ಏಕೆ? ಕಾಂಗ್ರೆಸ್, ಬಿಜೆಪಿ, ಪ್ರಾದೇಶಿಕ ಪಕ್ಷ ಯಾವುದೇ ಇರಲಿ ಅನ್ಯಾಯದ ವಿರುದ್ಧ ದನಿ ಎತ್ತುವ, ತನಿಖೆ ನಡೆಸುವಂತೆ ನೋಡಿಕೊಳ್ಳುವ ಕೆಲಸ ಮಾಡಬೇಕು. ಸಾಕ್ಷ್ಯ ನಾಶ ಮಾಡಲು ಯುವತಿಯ ಶವವನ್ನು ರಾತ್ರೋರಾತ್ರಿ ಸುಟ್ಟು ಹಾಕಿರುವುದು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಎಂಬುದರಲ್ಲಿ ಎರಡು ಮಾತಿಲ್ಲ.

ದಲಿತರು ಅಸಹಾಯಕರು ಎಂಬ ಕಾರಣಕ್ಕೆ ಪ್ರಕರಣವನ್ನು ಮರೆಗೆ ಸರಿಸಿ ಅಪರಾಧಕ್ಕೆ ಕುಮ್ಮಕ್ಕು ನೀಡುವ ಕೆಲಸ ಸಮಾಜಕ್ಕೆ ಮಾರಕ. ಅತ್ಯಾಚಾರದಂತಹ ಅಮಾನುಷ ಕೃತ್ಯಕ್ಕೆ ಕಠಿಣ ಕ್ರಮ ಜರುಗಿಸದೆ, ಕೃತ್ಯ ಎಸಗಿದವರ ಪರ ನಿಲ್ಲುವುದು ನ್ಯಾಯೋಚಿತವೇ? ರಾಜಕಾರಣ ಬದಿಗಿಟ್ಟು ತನಿಖೆಯನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರಿಗೆ, ಸಾಕ್ಷ್ಯ ನಾಶ ಮಾಡಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ದೇಶದ ಜನರಿಗೆ ತಪ್ಪು ಸಂದೇಶ ರವಾನೆ ಆಗುತ್ತದೆ.

ಚೆಲುವರಾಜು ಕೆ., ಧನಗೆರೆ, ಕೊಳ್ಳೇಗಾಲ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.