ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಸಂಖ್ಯೆ ಹೆಚ್ಚಿದರಷ್ಟೇ ಸಾಲದು

Last Updated 17 ಏಪ್ರಿಲ್ 2022, 20:30 IST
ಅಕ್ಷರ ಗಾತ್ರ

ಮುಂದಿನ 10 ವರ್ಷಗಳಲ್ಲಿ ದಾಖಲೆಯ ಸಂಖ್ಯೆಯಲ್ಲಿ ವೈದ್ಯರ ಹೆಚ್ಚಳವಾಗಲಿದೆ ಎಂದು ಗುಜರಾತಿನ ಆಸ್ಪತ್ರೆ
ಯೊಂದರ ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದು ಆಶಾಭಾವನೆ ಮೂಡಿಸಿದೆ. ಇಂದು ಭಾರತದಲ್ಲಿ ಜನಸಂಖ್ಯೆಗೆ ತಕ್ಕಷ್ಟು ವೈದ್ಯರಿಲ್ಲ. ಈ ಕೊರತೆಯನ್ನು ನೀಗಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಸರ್ಕಾರದ ನೀತಿಯು ಸಮಂಜಸವಾಗಿದೆ. ಆದರೆ ಆರೋಗ್ಯ ಕ್ಷೇತ್ರದಲ್ಲಿ ನಾವು ಸಾಧಿಸಬೇಕಾಗಿರುವುದು ಇನ್ನೂ ಬಹಳಷ್ಟಿದೆ. ಮೂಲ ಸೌಕರ್ಯ ಹಾಗೂ ಸಿಬ್ಬಂದಿಯ ಕೊರತೆ, ಗುಣಮಟ್ಟದ ಚಿಕಿತ್ಸೆಯ ಅಭಾವದಂತಹ ಕಾರಣಗಳಿಂದಾಗಿ ಸಾರ್ವಜನಿಕ ಆರೋಗ್ಯ ಸೇವೆಯ ಬಳಕೆ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಜನರ ಸರಾಸರಿ ಆದಾಯದಲ್ಲಿ ಕಾಲು ಭಾಗಕ್ಕಿಂತ ಹೆಚ್ಚು ಮೊತ್ತವು ಆರೋಗ್ಯ ಸಂಬಂಧಿ ವೆಚ್ಚಕ್ಕೆ ವ್ಯಯವಾಗುತ್ತಿದೆ. ಈ ಸಂಬಂಧದ ದುಬಾರಿ ಖರ್ಚಿನಿಂದ ಹಲವರು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. ಆರೋಗ್ಯ ವಿಮೆ ಸೌಲಭ್ಯ ಹೊಂದಿರುವವರು ಅತ್ಯಲ್ಪ ಮಂದಿ. ಹೀಗಾಗಿ ವೈದ್ಯರ ಸಂಖ್ಯೆ ಹೆಚ್ಚಳ ಮಾತ್ರವಲ್ಲದೆ ಇನ್ನೂ ಬಹಳಷ್ಟು ಸುಧಾರಣಾ ಕ್ರಮಗಳ ಅವಶ್ಯಕತೆ ಇದೆ.

-ಎ.ಜೆ.ಜಾವೀದ್,ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT