ಗುರುವಾರ , ಡಿಸೆಂಬರ್ 3, 2020
19 °C

ಮೊಬೈಲ್ ದಾಸರಾಗದಿರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಓದು ಹವ್ಯಾಸ, ಮೊಬೈಲ್ ಚಟ’ ಎನ್ನುವ ರವೀಂದ್ರ ಭಟ್ಟ ಅವರ ಲೇಖನವು (ಪ್ರ.ವಾ., ಅ. 28) ಪ್ರಸ್ತುತ ಸಮಾಜಕ್ಕೆ ಹಿಡಿದ ಕನ್ನಡಿಯಂತಿದೆ. ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ಬಳಕೆದಾರರ ಸಂಖ್ಯೆ ಏರಿಕೆಯಾಗುತ್ತಿದೆ. ಮೊಬೈಲ್ ಈಗ ಬದುಕಿನ ಅವಿಭಾಜ್ಯ ಅಂಗವಾಗಿದೆ. ನಮಗೆ ಮೊಬೈಲ್ ಎಷ್ಟು ಉಪಯುಕ್ತ ಆಗಿದೆಯೋ ಅಷ್ಟೇ ಹಾನಿಕಾರಕ ಕೂಡ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ.

ಸ್ಮಾರ್ಟ್ ಫೋನ್ ಅತಿಯಾಗಿ ಬಳಸುವವರು ಓದುವ ಹವ್ಯಾಸದಿಂದ ವಿಮುಖರಾಗುತ್ತಿದ್ದಾರೆ. ಪುಸ್ತಕ, ಪತ್ರಿಕೆ ಓದುವ ಹವ್ಯಾಸಕ್ಕೆ ಗುಡ್ ಬೈ ಹೇಳಿ, ಎಲ್ಲವನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಮಿತಿಮೀರಿದ ಮೊಬೈಲ್ ಬಳಕೆಯಿಂದ ಮಾನಸಿಕ ಒತ್ತಡ, ಖಿನ್ನತೆ ಅನುಭವಿಸಬೇಕಾಗುತ್ತದೆ. ಮೊಬೈಲ್ ಬಳಕೆಯ ಅನುಕೂಲ ಮತ್ತು ಅನನುಕೂಲದ ಬಗ್ಗೆ ವ್ಯಾಪಕ ಚರ್ಚೆ ಆಗಬೇಕಾಗಿದೆ‌.

ಬಾಲಾಜಿ ಕುಂಬಾರ, ಚಟ್ನಾಳ, ಔರಾದ್

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು