ಸಂಸದ ಅನಂತಕುಮಾರ ಹೆಗಡೆ ಅವರು ಸ್ವಾತಂತ್ರ್ಯ ಹೋರಾಟದ ಕುರಿತು ಇತ್ತೀಚೆಗೆ ಹೇಳಿರುವ ಮಾತು ಖಂಡನೀಯ. ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಮಾತನಾಡದಿದ್ದರೆ ಯುವಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ‘ಉಪವಾಸಕ್ಕೆ ಹೆದರಿ ಬ್ರಿಟಿಷರು ಸ್ವಾತಂತ್ರ್ಯ ಕೊಟ್ಟು ಓಡಿಹೋದರು ಎಂಬ ಇತಿಹಾಸದ ಪಾಠ ಕೇಳಿದರೆ, ತಣ್ಣಗಿರುವ ರಕ್ತ ಹೆಪ್ಪುಗಟ್ಟುತ್ತದೆ’ ಎನ್ನುವಂತಹ ಅಪಾಯಕಾರಿ ಮಾತು ಸಮಾಜದಲ್ಲಿ ಹಿಂಸೆಯನ್ನು ಪ್ರಚೋದಿಸುವಂತಿದೆ.

ಇಂತಹ ನಾಯಕರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಿ, ಎಚ್ಚರಿಕೆ ನೀಡಬೇಕಾಗಿದೆ. ಈ ಮೂಲಕ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಪ್ರಯತ್ನಿಸಬೇಕಾಗಿದೆ.

ಮಾರುತೇಶ್ ಪುಲಮಘಟ್ಟ, ತುಮಕೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.