ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರೀದಿ ಪ್ರಮಾಣ ಹೆಚ್ಚಿಸಿ

Last Updated 24 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಪ್ರಸಕ್ತ ಹಂಗಾಮಿಗೆ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದ್ದು ರೈತರಲ್ಲಿ ಸಂತಸ ಮೂಡಿಸಿತ್ತು. ಆದರೆ ಇದ್ದಕ್ಕಿದ್ದಂತೆ ರೈತರ ಫಸಲಿನ ತಲಾ ಖರೀದಿ ಪ್ರಮಾಣವನ್ನು 4 ಕ್ವಿಂಟಲ್‍ಗೆ ಮಿತಿಗೊಳಿಸಿದ್ದು ಖಂಡನೀಯ. ಸರ್ಕಾರದ ಈ ತೀರ್ಮಾನದಿಂದಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.

ಉತ್ತರ ಕರ್ನಾಟಕದ ಬಹುತೇಕ ತಾಲ್ಲೂಕುಗಳಲ್ಲಿ ಬರ ಆವರಿಸಿದ್ದು, ಹಿಂಗಾರು ಮಳೆಯೂ ಕೈ ಕೊಡುವ ಆತಂಕ ಎದುರಾಗಿದೆ. ಮಳೆ ಬಿದ್ದ ಪ್ರದೇಶದಲ್ಲಿ ಬೆಳೆದ ಹೆಸರು, ಉದ್ದು ಇತ್ಯಾದಿ ಧಾನ್ಯಗಳ ಖರೀದಿಯನ್ನು 4 ಕ್ವಿಂಟಲ್‌ಗೆ ಸೀಮಿತಗೊಳಿಸಿದರೆ ರೈತರು ಮುಕ್ತ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಕಪಿಮುಷ್ಠಿಯಲ್ಲಿ ಸಿಲುಕುವ ಅಪಾಯ ಹೆಚ್ಚಿದೆ. ಈ ವಾಸ್ತವವನ್ನು ಮನಗಂಡು, ರೈತರ ಪೂರ್ತಿ ಫಸಲನ್ನು ಖರೀದಿಸುವಂತೆ ರಾಜ್ಯದ ಜನಪ್ರತಿನಿಧಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT