ಶುಕ್ರವಾರ, ಅಕ್ಟೋಬರ್ 23, 2020
26 °C

ಮಾದಕವಸ್ತು: ಸೋಜಿಗದ ಸಂಗತಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗತ್ತಿನಾದ್ಯಂತ ವ್ಯಾಪಿಸಿರುವ ಮಾದಕ ವಸ್ತುಗಳ ಬಗ್ಗೆ ನಾಗೇಶ ಹೆಗಡೆ ಅವರು ‘ಆನಂದಾಮೈಡ್‌ ಉಕ್ಕಿದರೆ ಸಾಲದೇ’ ಎಂಬ ಲೇಖನದಲ್ಲಿ (ಪ್ರ.ವಾ., ಸೆ. 10) ಬಹಳ ಚೆನ್ನಾಗಿ ತಿಳಿಸಿದ್ದಾರೆ. ಎಷ್ಟೋ ವರ್ಷಗಳಿಂದ ನಿರಂತರವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿರುವ ಈ ದಂಧೆಯನ್ನು, ಅನಿರೀಕ್ಷಿತವಾಗಿ ಜರುಗಿದ ಅಪರಾಧ ಎಂಬಂತೆ ಬಿಂಬಿಸುತ್ತಿರುವುದು ಸೋಜಿಗದ ಸಂಗತಿ.

ಇಷ್ಟು ವರ್ಷಗಳಿಂದ ಅವ್ಯಾಹತವಾಗಿ ನಡೆದುಕೊಂಡು ಬಂದಿರುವ ಈ ದಂಧೆಯ ಬಗ್ಗೆ ಪೊಲೀಸರಿಗೆ ಈಗಷ್ಟೇ ತಿಳಿಯಿತು ಎಂಬಂತೆ ಹೇಳಿಕೆ ಕೊಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಇದು ಬರೀ ಬೆಂಗಳೂರು ನಗರಕ್ಕೆ ಸೀಮಿತವಲ್ಲ ಎಂಬುದನ್ನು ಕೆಜಿಎಫ್‌ನ ಮನೆಯೊಂದರಲ್ಲಿ ಸಿಕ್ಕಿದ ಗಾಂಜಾ ತೋರಿಸಿದೆ. ನಮ್ಮ ಹಳ್ಳಿಗಳಲ್ಲಿ ಸಹ ಗಾಂಜಾ ಬೆಳೆ ನಾಶಪಡಿಸಿದ ಸುದ್ದಿಯನ್ನು ಆಗಾಗ ಓದುವುದು ಸಾಮಾನ್ಯ ಸಂಗತಿ. ಈಗಲಾದರೂ ಯುವಕರಿಗೆ, ವಿದ್ಯಾರ್ಥಿಗಳಿಗೆ ಮಾದಕವಸ್ತು ಸಿಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗಿದೆ.

- ಡಾ. ಟಿ.ಜಯರಾಂ, ಕೋಲಾರ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು