ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಅನ್ವಯಿಸದೇ?

Last Updated 26 ಮಾರ್ಚ್ 2019, 17:43 IST
ಅಕ್ಷರ ಗಾತ್ರ

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಸಲು ತಮ್ಮ ಹಿಂಬಾಲಕರ ಪಟಾಲಂ ಕಟ್ಟಿಕೊಂಡು ಮೈಸೂರು– ಬೆಂಗಳೂರು ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.

ಈ ಭರದಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಕೊಡುವ ಅಧಿಕಾರವನ್ನು ಅವರಿಗೆ ಕೊಟ್ಟವರಾರು? ಬೆಂಗಳೂರಿಗೆ ಹೋಗಬೇಕಿದ್ದ ಕಾರು, ಬಸ್ಸುಗಳನ್ನು ಮದ್ದೂರು, ಮಳವಳ್ಳಿಯ ಮೂಲಕ ತೆರಳಲು ಸೂಚಿಸಲಾಗಿತ್ತು. ಇದರಿಂದ ಸಾರ್ವಜನಿಕರು ಅನುಭವಿಸಿದ ತೊಂದರೆ ಅನುಭವಿಸಿದವರಿಗಷ್ಟೇ ಗೂತ್ತು. ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ, ಸರ್ಕಾರಿ ಯಂತ್ರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದಕ್ಕೆ ಇದು ಒಂದು ಉದಾಹರಣೆ ಅಷ್ಟೆ.

ಈ ನಿಟ್ಟಿನಲ್ಲಿ ಚುನಾವಣಾ ಆಯೋಗವು ಸರ್ಕಾರ ಹಾಗೂ ನಿಖಿಲ್ ಅವರ ವಿರುದ್ಧ ನೀತಿ ಸಂಹಿತೆಯ ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸಬೇಕು.

ಎಸ್.ಸಿ.ರಮೇಶ್, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT