ಬುಧವಾರ, ಡಿಸೆಂಬರ್ 2, 2020
17 °C

ಆಯೋಗ ಆತ್ಮಾವಲೋಕನ ಮಾಡಿಕೊಳ್ಳಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ ಉಪಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದರಲ್ಲಿ ಆಶ್ಚರ್ಯ ಪಡುವಂತಹದ್ದೇನಿದೆ? ಹೌದು, ಒಂದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆಯವರೆಗೂ ಒಂದಲ್ಲ ಒಂದು ರೀತಿಯಲ್ಲಿ ಕೆಲವು ಮತದಾರರಿಗೆ ಅಭ್ಯರ್ಥಿಗಳು ದುಡ್ಡು ಹಂಚುತ್ತಾರೆ. ಚುನಾವಣಾ ಆಯೋಗ ಇತ್ತೀಚೆಗೆ ಹಲ್ಲುಕಿತ್ತ ಹಾವಿನಂತಾಗಿದೆ. ಚುನಾವಣೆಯ ಸಮಯದಲ್ಲಿ ಅಕ್ರಮವಾಗಿ ಸಾಗಿಸುವ ಹಣವನ್ನು ಆಯೋಗ ವಶಪಡಿಸಿಕೊಳ್ಳುತ್ತದೆ. ಆದರೆ ಅದು ಯಾರಿಗೆ ಸೇರಿದ್ದು, ಅದರ ಹಿಂದಿರುವವರು ಯಾರು ಎಂಬುದನ್ನು ಎಷ್ಟು ಪ್ರಕರಣಗಳಲ್ಲಿ ತನಿಖೆ ಮಾಡಿ, ಎಷ್ಟು ಜನರಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದೆ? ಈ ಕುರಿತು ಆಯೋಗವು ಆತ್ಮಾವಲೋಕನ ಮಾಡಿಕೊಳ್ಳಲಿ.

ಕೆಲವು ದಿನಗಳ ಹಿಂದೆ ಒಬ್ಬ ಜನಪ್ರತಿನಿಧಿ ‘ಹಣವಿಲ್ಲದೆ ಚುನಾವಣೆ ಎದುರಿಸಲು ಸಾಧ್ಯವಿಲ್ಲ’ ಎಂದು ವಿಧಾನಸಭೆಯ ಕಲಾಪದಲ್ಲಿಯೇ ರಾಜಾರೋಷವಾಗಿ ಹೇಳಿಕೆ ನೀಡಿದ್ದರು. ಇದು ವಾಸ್ತವ ಕೂಡ. ರೋಗಿ ಬಯಸಿದ್ದೂ ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ ಎನ್ನುವ ಗಾದೆ ಮಾತಿನಂತೆ ಆಗಿದೆ ಪ್ರಜೆಗಳು ಮತ್ತು ಜನಪ್ರತಿನಿಧಿಗಳ ಪಾಡು. ಚುನಾವಣೆ ಮುಗಿಯುವವರೆಗೆ ಮಾತ್ರ ಇದರ ಬಗ್ಗೆ ಚರ್ಚೆ, ನಂತರ ಎಲ್ಲಾ ಜಾಣಮರೆವು!

ರಾಜು ಬಿ. ಲಕ್ಕಂಪುರ, ಜಗಳೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು