ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ಚಾಲಿತ ವಾಹನ ಮೇಳ: ಜಿಲ್ಲೆಗೂ ಬರಲಿ

ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ‘ಬೆಸ್ಕಾಂ’ ವತಿಯಿಂದ ಇತ್ತೀಚೆಗೆ ನಡೆದ ವಿಭಾಗ ಮಟ್ಟದ ಮೂರು ದಿನಗಳ ವಿದ್ಯುತ್‌ಚಾಲಿತ ವಾಹನಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಲಕ್ಷಾಂತರ ಜನ ಭಾಗವಹಿಸಿ, ವಿದ್ಯುತ್‌ಚಾಲಿತ ವಾಹನಗಳ ಬಳಕೆ ಮತ್ತು ನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ಪಡೆದರು; ಸ್ಥಳದಲ್ಲೇ ವಿವಿಧ ಮಾದರಿಯ ನೂರಾರು ವಾಹನಗಳ ಮುಂಗಡ ಬುಕಿಂಗ್‌ ಕೂಡ ಆಗಿದೆ ಎಂದು ವರದಿಯಾಗಿದೆ.

ಸರ್ಕಾರ ಇಂತಹ ಮೇಳಗಳನ್ನು ಜಿಲ್ಲಾ ಕೇಂದ್ರಗಳಲ್ಲೂ ನಡೆಸಬೇಕು. ವಿದ್ಯುತ್‌ಚಾಲಿತ ವಾಹನಗಳ ಬಳಕೆಯ ಬಗ್ಗೆ ರಾಜ್ಯವ್ಯಾಪಿ ಜನರಿಗೆ ಅರಿವು ಮೂಡಿಸಿ ಹೆಚ್ಚೆಚ್ಚು ವಿದ್ಯುತ್‌ಚಾಲಿತ ವಾಹನಗಳನ್ನು ಬಳಸುವಂತೆ ಉತ್ತೇಜಿಸ ಬೇಕು. ಅದಕ್ಕೆ ಬೇಕಾಗುವ ಮೂಲ ಸೌಕರ್ಯಗಳಾದ ಚಾರ್ಜಿಂಗ್ ಪಾಯಿಂಟ್ ಹಾಗೂ ಸರ್ವಿಸ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ವಾಯುಮಾಲಿನ್ಯ ಕಡಿಮೆಯಾಗಬಹುದು. ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್‌ಗೂ ಬೇಡಿಕೆ ಕಡಿಮೆಯಾಗಬಹುದು.

- ಭಾಸ್ಕರ್ ಶೆಟ್ಟಿ,ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT