ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಶಾಲೆಗಳ ಅಳಿವು– ಉಳಿವು

Last Updated 27 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ರಾಜ್ಯದ ಶಿಕ್ಷಣ ಇಲಾಖೆ ನಡೆಸಿದ ಉಪಗ್ರಹ ಆಧಾರಿತ ಮ್ಯಾಪಿಂಗ್‌ನಿಂದ ರಾಜ್ಯದ 5,272 ಗ್ರಾಮಗಳಲ್ಲಿ ಪ್ರಾಥಮಿಕ ಶಾಲೆಗಳೇ ಇಲ್ಲದಿರುವ ಅಂಶ ಬೆಳಕಿಗೆ ಬಂದಿದೆ (ಪ್ರ.ವಾ., ಡಿ.17) ಎಂದು ವರದಿಯಾಗಿದೆ. ಇದು ನಿಜಕ್ಕೂ ವಿಪರ್ಯಾಸದ ಸಂಗತಿ. ಪ್ರಾಥಮಿಕ ಶಾಲಾ ಹಂತದಲ್ಲೇ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧನೆಯನ್ನು ಜಾರಿಗೊಳಿಸಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ಇಷ್ಟೊಂದು ಗ್ರಾಮಗಳಲ್ಲಿ ಶಾಲೆಗಳೇ ಇಲ್ಲದಿರುವುದು ಮತ್ತು ಇರುವ ಕನ್ನಡ ಶಾಲೆಗಳ ದಾರುಣ ಸ್ಥಿತಿಯು ಕಾಣುತ್ತಿಲ್ಲವೇ?

ಹಿಂದೆ ಗ್ರಾಮೀಣ ಭಾಗಗಳಲ್ಲಿದ್ದ ಅದೆಷ್ಟೋ ಶಾಲೆಗಳು ಈಗ ಮುಚ್ಚಿವೆ. ಸಮರ್ಪಕವಾದ ನಿರ್ವಹಣೆ ಇಲ್ಲದೇ, ಶಿಕ್ಷಕರಿಲ್ಲದೇ, ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೂ ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳ ತಾತ್ಸಾರ ಮನೋಭಾವದಿಂದಾಗಿ ಸರ್ಕಾರಿ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿವೆ. ಗಡಿ ಜಿಲ್ಲೆಗಳ ಶಾಲೆಗಳ ಅವ್ಯವಸ್ಥೆ ಹೇಳತೀರದು!

ಕನ್ನಡ ಶಾಲೆಗಳ ಅವನತಿಯಿಂದಾಗಿ ಅದೆಷ್ಟೋ ಬಡಮಕ್ಕಳು ಶಿಕ್ಷಣದಿಂದ ವಂಚಿತರಾಗಿ, ಅನಕ್ಷರಸ್ಥರಾಗಿ ಉಳಿಯುತ್ತಿದ್ದಾರೆ ಎಂಬುದು ಕಠೋರ ಸತ್ಯ. ಸರ್ಕಾರ ಇಂಥ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಾಗಿದೆ.

-ಬಾಬು ಶಿರಮೋಜಿ, ಬೆಳಗಾವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT