ಮಂಗಳವಾರ, ಮಾರ್ಚ್ 21, 2023
22 °C

ವಾಚಕರ ವಾಣಿ | ದೆಹಲಿ ವಾಯುಮಾಲಿನ್ಯ: ಇತರರಿಗೆ ಪಾಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿಯಲ್ಲಿ ಪ್ರಾಣವಾಯು ವಿಷವಾಯುವಾಗಿ ಬದಲಾಗುತ್ತಿರುವ ವಿದ್ಯಮಾನವು ಆತಂಕಕಾರಿಯಾಗಿದೆ. ದೆಹಲಿಯ ವಾಯುಮಾಲಿನ್ಯ ಮಿತಿಮೀರಿರುವುದಕ್ಕೆ ಸುತ್ತಮುತ್ತಲಿನ ಪ್ರದೇಶಗಳ ರೈತರು ಕೃಷಿ ಕೂಳೆ ಯನ್ನು ಸುಡುತ್ತಿರುವುದು ಹಾಗೂ ರಾಜಧಾನಿಯ ಸುತ್ತಲಿನ ಕಾರ್ಖಾನೆಗಳು ಹೊರಸೂಸುತ್ತಿರುವ ರಾಸಾಯನಿಕ ಯುಕ್ತ ಹೊಗೆಯೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇದರ ಜೊತೆಗೆ ದೆಹಲಿಯಲ್ಲಿ ವಾಹನಗಳ ದಟ್ಟಣೆಯೂ ಹೆಚ್ಚುತ್ತಿದೆ. ಹಾಗಾಗಿ, ವಾಯುಮಾಲಿನ್ಯ ನಿಯಂತ್ರಣಕ್ಕೆ ಹೈಡ್ರೋಜನ್ ಆಧಾರಿತ ಇಂಧನ ತಂತ್ರಜ್ಞಾನದ ಪರಿಹಾರ ಸೂತ್ರ ಕಂಡುಕೊಳ್ಳುವುದು ಅವಶ್ಯಕವಾಗಿದೆ. ಅಲ್ಲದೆ ರಾಷ್ಟ್ರ ರಾಜಧಾನಿಯ ಇಂದಿನ ಪರಿಸ್ಥಿತಿಯ ವಿಕೋಪವನ್ನು ದೇಶದ ಉಳಿದ ನಗರಗಳೂ ಅರಿತು, ತುರ್ತಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು