ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ: ಸಮಂಜಸ ನಿರ್ಧಾರ

Last Updated 12 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಶಿವಮೊಗ್ಗ ಮತ್ತು ಮೈಸೂರನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಏನು ಮಾನದಂಡ ಎಂದು ಮೋನಿಕ ಆರ್‌. ಪ್ರಶ್ನೆ ಮಾಡಿದ್ದಾರೆ (ವಾ.ವಾ., ಮಾರ್ಚ್‌ 12). ಉತ್ತರ ಕರ್ನಾಟಕದ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಈಗಾಗಲೇ ಕ್ಯಾನ್ಸರ್ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಹಿಂದಿನ ಆಯವ್ಯಯಗಳಲ್ಲಿ ಕಲಬುರ್ಗಿ ಮತ್ತು ಕಾರವಾರಕ್ಕೆ ಕ್ಯಾನ್ಸರ್ ಕೇಂದ್ರಗಳು ಮಂಜೂರಾಗಿವೆ. ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.

ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಗಣನೀಯವಾಗಿ ಏರಿದ್ದು, ಸರ್ಕಾರಿ ಸ್ವಾಮ್ಯದ ಕ್ಯಾನ್ಸರ್ ಕೇಂದ್ರ ತೆರೆಯಬೇಕೆಂಬ ಬೇಡಿಕೆ ಏಳೆಂಟು ವರ್ಷಗಳಿಂದ ಚಾಲ್ತಿಯಲ್ಲಿದೆ. ಆದ್ದರಿಂದ ಈ ನಗರಗಳಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರ ಸಮಂಜಸವಾಗಿದೆ.

–ಡಾ. ಕೆ.ಎಸ್.ಗಂಗಾಧರ, ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT