ಶನಿವಾರ, ಜನವರಿ 16, 2021
24 °C

ಪಠ್ಯೇತರ ಅಂಶಕ್ಕೂ ಬೇಕು ಆದ್ಯತೆ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

‘ಮಕ್ಕಳಸ್ನೇಹಿ ಕಲಿಕೆಯ ಸವಾಲು’ ಕುರಿತ ಡಾ. ಎಚ್.ಬಿ.ಚಂದ್ರಶೇಖರ್ ಅವರ ಲೇಖನ (ಸಂಗತ, ಜ. 12) ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಚಿಂತನೆಗಳು ಹಾಗೂ ಔಚಿತ್ಯಪೂರ್ಣವಾದ ಅಂಶಗಳಿಂದ ಕೂಡಿದೆ. ಶಿಕ್ಷಕರು ಪಠ್ಯ ವಿಷಯಗಳಿಗೆ ಸೀಮಿತಗೊಳ್ಳದೆ ಪಠ್ಯೇತರ ಅಂಶಗಳನ್ನು ತಮ್ಮ ಬೋಧನೆಯಲ್ಲಿ ಅಳವಡಿಸಿಕೊಂಡು, ಮಕ್ಕಳ ಬುದ್ಧಿಮಟ್ಟ ಉತ್ತಮವಾದ ರೀತಿಯಲ್ಲಿ ಬೆಳವಣಿಗೆ ಆಗುವಂತೆ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಇದೆ.

ಇಂದಿನ ಡಿಜಿಟಲ್ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಹಲವರನ್ನು ಹಿಂದಿಕ್ಕಿ ಮುನ್ನುಗ್ಗಬೇಕಾದ ಪರಿಸ್ಥಿತಿಯಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಯತ್ತ ಶಿಕ್ಷಕರು ಗಮನಹರಿಸಬೇಕಾಗಿದೆ. ಅಂದಾಗ ಮಾತ್ರ ಶಿಕ್ಷಣದಿಂದ ಹೆಚ್ಚಿನ ನಿರೀಕ್ಷೆಯನ್ನು ಮಾಡಬಹುದು.

- ಡಾ. ಸಂಜೀವಕುಮಾರ ಅತಿವಾಳೆ, ಬೀದರ್‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.