ಗುರುವಾರ , ಆಗಸ್ಟ್ 18, 2022
24 °C

ಸಂಚಾರ ನಿಯಮ ಪಾಲನೆ ಆದ್ಯತೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ‘ಸಂಚಾರಿ’ ವಿಜಯ್ ತಮ್ಮ ಗೆಳೆಯನೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿ ಇಹಲೋಕವನ್ನು ತ್ಯಜಿಸಿದ್ದಾರೆ. ಇಬ್ಬರೂ ಸವಾರರು ಹೆಲ್ಮೆಟ್ ಧರಿಸದೆ ಇದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಸಮಾಜಕ್ಕೆ ಮಾದರಿಯಾಗಬೇಕಾದ ಇಂತಹ ಪ್ರಸಿದ್ಧ ವ್ಯಕ್ತಿಯೇ ಈ ರೀತಿ ಹೆಲ್ಮೆಟ್ ಧರಿಸದೆ ಕರ್ಫ್ಯೂ ಸಮಯದಲ್ಲಿ ರಸ್ತೆಯಲ್ಲಿ ಅಡ್ಡಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿರುವುದು ಸರಿಯಲ್ಲ.

ಸಾರ್ವಜನಿಕ ಜೀವನದಲ್ಲಿ ಇರುವವರು ಮಾದರಿಯಾಗಿ ಬದುಕಿ ಬೇರೆಯವರಿಗೆ ಪ್ರೇರಣೆಯಾಗಬೇಕು. ಇನ್ನಾದರೂ ನಾಗರಿಕರು ಸಂಚಾರ ನಿಯಮಗಳನ್ನು ಗೌರವಿಸಿ ಅದರಂತೆ ನಡೆದು ತಮ್ಮ ಜೀವವನ್ನು ಕಾಪಾಡಿಕೊಳ್ಳಲಿ. ಪ್ರಾಣಕ್ಕಿಂತ ಯಾವುದೂ ಹೆಚ್ಚಲ್ಲ.→→

- ಪತ್ತಂಗಿ ಎಸ್. ಮುರಳಿ, ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು