ಸೋಮವಾರ, ಮೇ 17, 2021
23 °C

ಪಿಒಪಿ, ರಾಸಾಯನಿಕ ಬಣ್ಣ ಬಳಸಿದ ಗಣೇಶನ ಮೂರ್ತಿ ನಿಷೇಧಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಣೇಶ ಹಬ್ಬ ಸಮೀಪಿಸುತ್ತಿದೆ. ‘ಪಿಒಪಿಯಿಂದ ತಯಾರಿಸಿದ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸಿದ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಡಿ, ಇದರಿಂದ ಪರಿಸರಕ್ಕೆ ಹಾನಿಯಾಗುತ್ತದೆ’ ಎಂದು ಪರಿಸರ ಪ್ರೇಮಿಗಳು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಇದ್ದಾರೆ.

ಹಿಂದೆ ಮಣ್ಣಿನಿಂದ ತಯಾರಿಸಿದ ಮತ್ತು ನೈಸರ್ಗಿಕ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಪೂಜಿಸುತ್ತಿದ್ದರು. ಪರಿಸರಸ್ನೇಹಿ ಮೂರ್ತಿಗಳ ವಿಸರ್ಜನೆಯಿಂದ ನೀರಿನ ಮೂಲಗಳು ಮಲಿನವಾಗುತ್ತಿರಲಿಲ್ಲ. ಆದರೆ ಇತ್ತಿಚೆಗೆ ಪಿಒಪಿ ಮೂರ್ತಿಗಳು ಮತ್ತು ಅವುಗಳಿಗೆ ಬಳಸುವ ರಾಸಾಯನಿಕ ಬಣ್ಣಗಳಿಂದ ಪರಿಸರಕ್ಕೆ ಹಾನಿಯಾಗಿದೆ. ಆದ್ದರಿಂದ ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನೇ ನಿಷೇಧಿಸಲು ಕ್ರಮ ಕೈಗೊಳ್ಳಬೇಕು.

–ಮಣಿಕಂಠ ಪಾ. ಹಿರೇಮಠ, ಬಾಗಲಕೋಟೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು