ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಮತಗಟ್ಟೆಗಳಿಗೆ ಬಹುಮಾನ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಹೇಳಿಕೆ
Last Updated 20 ಏಪ್ರಿಲ್ 2018, 5:29 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮಾದರಿ ಮತಗಟ್ಟೆಗಳಿಗೆ ಸೂಕ್ತ ಬಹುಮಾನ ಕೊಡಲಾಗುವುದು’ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ತಿಳಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಚುನಾವಣೆ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಮತದಾರರನ್ನು ಮತದಾನಕ್ಕೆ ಪ್ರೇರೇಪಿಸುವ ದಿಸೆಯಲ್ಲಿ ಮತಗಟ್ಟೆಗಳನ್ನು ಅಣಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಮಾತನಾಡಿ, ‘ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ಆಶ್ರಯದಲ್ಲಿ ಜಿಲ್ಲೆಯ ವಿವಿಧೆಡೆ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ’ ಎಂದು ತಿಳಿಸಿದರು.

‘ಮಂಗಳಮುಖಿಯರಲ್ಲೂ ಮತದಾನ ಜಾಗೃತಿ ಮೂಡಿಸಲಾಗಿದೆ. ಕೆಎಸ್‍ಆರ್‌ಟಿಸಿ ಹಾಗೂ ಕೆಇಬಿ ನೌಕರರ ಕುಟುಂಬದವರು ಹಾಗೂ ಸಂಘ ಸಂಸ್ಥೆಗಳ ಸದಸ್ಯರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಬೀದರ್‌ ಹಾಗೂ ಬಸವಕಲ್ಯಾಣ ಉಪ ವಿಭಾಗಾಧಿಕಾರಿಗಳು, ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ನೊಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT