ಭಾನುವಾರ, ನವೆಂಬರ್ 29, 2020
19 °C

ವಾಚಕರ ವಾಣಿ: ಅನುದಾನದ ಭರವಸೆ ಹುಸಿಯಾಗದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಮಳೆ ಹಾಗೂ ಪ್ರವಾಹಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ, ಹಾನಿಗೊಳಗಾದ ಮನೆಗಳ ಪುನರ್‌ನಿರ್ಮಾಣಕ್ಕೆ ಪರಿಹಾರ ಘೋಷಿಸಿದ್ದಾರೆ.

ಕಳೆದ ವರ್ಷ ಭಾರಿ ಮಳೆ ಬಂದಾಗ ಯಡಿಯೂರಪ್ಪ ಅವರು ತೊಂದರೆಗೆ ಒಳಗಾದ ಜನರ ನೋವನ್ನು ನೇರವಾಗಿ ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿ ಹೋಗಿದ್ದರು. ಆದರೆ ಆ ಭರವಸೆಯನ್ನು ಇನ್ನೂ ಈಡೇರಿಸಲು ಸಾಧ್ಯವಾಗಿಲ್ಲ. ಮನೆಗಳು, ಜಾನುವಾರುಗಳನ್ನು ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಮಂಜೂರಾದ ಮನೆಗಳಿಗೇ ಇನ್ನೂ ಅನುದಾನ ದೊರೆತಿಲ್ಲ. ಹೀಗಿರುವಾಗ ಇಂತಹ ಭರವಸೆಯು ಭರವಸೆ ಮಾತ್ರವೇ ಆಗಿ ಉಳಿಯದೆ, ಅತಿ ಶೀಘ್ರವಾಗಿ ಮನೆಗಳನ್ನು ನಿರ್ಮಿಸುವುದಕ್ಕೆ ಪೂರಕವಾಗಿ ಅನುದಾನ ಬಿಡುಗಡೆಯಾಗಲಿ.

-ಜಗನ್ನಾಥ ಎಸ್. ನಿಡಗುಂದಾ, ಚಿಂಚೋಳಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು