ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದ ಆಯ್ಕೆ ಹಕ್ಕು ಕಸಿಯುವ ಹುನ್ನಾರ

Last Updated 9 ಜೂನ್ 2019, 18:30 IST
ಅಕ್ಷರ ಗಾತ್ರ

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಐಚ್ಛಿಕ ಕೋರ್ಸುಗಳ ಅಧ್ಯಯನಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ 15ಕ್ಕಿಂತ ಕಡಿಮೆ ಇದ್ದರೆ, ಅಂತಹ ಕೋರ್ಸುಗಳ ಅಧ್ಯಯನದ ಅವಕಾಶವನ್ನು ಮೊಟಕುಗೊಳಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ (ಪ್ರ.ವಾ., ಜೂನ್ 8). ಈ ನೀತಿಯು ವಿದ್ಯಾರ್ಥಿಗಳ ಶಿಕ್ಷಣದ ಆಯ್ಕೆಯ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ. ಎಲ್ಲ ಮಕ್ಕಳಿಗೂ ಅವರದೇ ಆದ ಕನಸುಗಳಿರುತ್ತವೆ. ಅವುಗಳನ್ನು ಈಡೇರಿಸಿಕೊಳ್ಳಲು ತಮ್ಮಿಷ್ಟದ ಕೋರ್ಸುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಶಿಕ್ಷಣ ಇಲಾಖೆಯ ಈ ನಿಯಮವು ವಿದ್ಯಾರ್ಥಿಗಳ ಕನಸನ್ನು ನುಚ್ಚುನೂರು ಮಾಡುತ್ತದೆ.

‌ಮಕ್ಕಳನ್ನು ಪಿಯುಸಿ ಹಂತದಲ್ಲೇ ಸ್ವಾವಲಂಬಿ ಜೀವನಕ್ಕೆ ಸಿದ್ಧಗೊಳಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಅಂಶ. ವಿದ್ಯಾರ್ಥಿಗಳ ಕನಸುಗಳಿಗೆ ಪೂರಕವಾದ ಕೋರ್ಸುಗಳಿಗೆ ಪ್ರವೇಶಾವಕಾಶ ನೀಡಿದಾಗ ಮಾತ್ರವೇ ಈ ನೀತಿಯ ಆಶಯ ಸಾಕಾರವಾಗುತ್ತದೆ. ಹೀಗಾಗಿ ಈ ಸುತ್ತೋಲೆಯನ್ನು ಪುನರ್‌ವಿಮರ್ಶೆಗೆ ಒಳಪಡಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT