ಶನಿವಾರ, ನವೆಂಬರ್ 28, 2020
22 °C

ರೋಗಿಗಳಿಗೆ ಅನನುಕೂಲವೇ ಹೆಚ್ಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ನಗರ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಸುತ್ತಲಿನ 100 ಮೀಟರ್‌ ವ್ಯಾಪ್ತಿಯಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ 200 ಮೀಟರ್‌ ವ್ಯಾಪ್ತಿಯಲ್ಲಿ ಖಾಸಗಿ ಔಷಧಿ ಮಳಿಗೆ ತೆರೆಯಲು ಅನುಮತಿ ನೀಡದಿರಲು ಉದ್ದೇಶಿಸಲಾಗಿದೆ’ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಇದರಿಂದ ತುರ್ತು ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚಾಗುತ್ತದೆ. ನಮ್ಮ ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಔಷಧ ದಾಸ್ತಾನು ಎಷ್ಟರಮಟ್ಟಿಗೆ ಸರಿ ಇದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಎಲ್ಲಾ ಔಷಧಗಳು ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯ ಇಲ್ಲ ಎನ್ನುವುದು ಸತ್ಯ.

ಹೆರಿಗೆ, ಅಪಘಾತ, ಹೃದಯಾಘಾತದಂತಹ ತುರ್ತು ಸಂದರ್ಭಗಳಲ್ಲಿ ಬೇಕಾಗುವ ಔಷಧಗಳು ಹತ್ತಿರದ ಖಾಸಗಿ ಔಷಧದ ಅಂಗಡಿಯಲ್ಲಿ ಸಿಕ್ಕಿದರೆ ರೋಗಿ ಬದುಕುಳಿಯುವ ಅವಕಾಶ ಇರುತ್ತದೆ. ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಔಷಧ ಮಳಿಗೆಗಳನ್ನು ದೂರ ಇಡುವ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುವ ಅನುಕೂಲವಾದರೂ ಏನು?

–ವಿ.ತಿಪ್ಪೇಸ್ವಾಮಿ, ಹಿರಿಯೂರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು