ಭಾನುವಾರ, ಸೆಪ್ಟೆಂಬರ್ 27, 2020
21 °C

ಅತಿಥಿ ಉಪನ್ಯಾಸಕರತ್ತ ಗಮನಹರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ನೂರಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಪಕ್ಷದ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಅವರ ಬೇಡಿಕೆಗಳು ಈಡೇರುತ್ತಿಲ್ಲ.

ಜೆಡಿಎಸ್– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವು ಅತಿಥಿ ಉಪನ್ಯಾಸಕರ ವೇತನವನ್ನು ₹ 5 ಸಾವಿರದಿಂದ 6 ಸಾವಿರದಷ್ಟು ಹೆಚ್ಚಿಸುವುದಾಗಿ ಘೋಷಿಸಿತ್ತು (ಈಗ ಅವರು ₹ 11 ಸಾವಿರ ಮತ್ತು ₹ 13 ಸಾವಿರ ವೇತನ ಪಡೆಯುತ್ತಿದ್ದಾರೆ). ನಂತರದಲ್ಲಿ ಯುಜಿಸಿ, ದೇಶದಲ್ಲಿನ ಎಲ್ಲ ವಿಶ್ವ ವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನವನ್ನು ಗರಿಷ್ಠ ₹ 50 ಸಾವಿರದವರೆಗೆ ನಿಗದಿಪಡಿಸಬಹುದೆಂದು ಸೂಚಿಸಿತು. ಆದರೆ, ರಾಜ್ಯ ಸರ್ಕಾರವು ಇದ್ಯಾವುದರ ಪರಿವೆಯೇ ಇಲ್ಲದಂತೆ ವರ್ತಿಸುತ್ತಿದೆ.

2019-20ನೇ ಶೈಕ್ಷಣಿಕ ಸಾಲಿನ ಪದವಿ ತರಗತಿಗಳು ಪ್ರಾರಂಭವಾಗಿ 3 ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ. ಬೀದಿಗಿಳಿದು ಹೋರಾಡುವುದಕ್ಕಿಂತ ಮೊದಲೇ ಅವರ ದುಃಸ್ಥಿತಿಯನ್ನು ಸರ್ಕಾರ ಕಣ್ತೆರೆದು ನೋಡಲಿ.

-ಪ್ರೊ.ಎ.ವೈ.ಸೋನ್ಯಾಗೋಳ, ಪಾಶ್ಚಾಪೂರ, ಹುಕ್ಕೇರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು