ಶನಿವಾರ, ಆಗಸ್ಟ್ 20, 2022
22 °C

ವೆಬ್‌ಸೈಟ್‌ ಮೇಲ್ದರ್ಜೆಗೇರಿಸಲು ಎಷ್ಟು ದಿನ ಬೇಕು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಕಂದಾಯ ಇಲಾಖೆಯ ವೆಬ್‌ಸೈಟ್‌ನಲ್ಲಿ ಒಂದು ವಾರದಿಂದಲೂ ತಾಂತ್ರಿಕ ತೊಂದರೆ ಉಂಟಾಗುತ್ತಿದೆ. ವೆಬ್‌ಸೈಟ್‌ಗೆ ಭೇಟಿ ಕೊಡುವವರಿಗೆ ‘ಮೇಲ್ದರ್ಜೆಗೆ ಏರಿಸಲಾಗುತ್ತಿದೆ’ ಎಂಬ ಉತ್ತರ ದೊರೆಯುತ್ತಿದೆ. ಇದರಿಂದ ಸಂಬಂಧಪಟ್ಟ ಇಲಾಖೆಯಿಂದ ಜಾತಿ, ಆದಾಯ ಪ್ರಮಾಣಪತ್ರಗಳನ್ನು ಪಡೆಯಲು ವಿಳಂಬವಾಗುತ್ತಿದೆ. ಸೂಕ್ತ ಸಮಯದಲ್ಲಿ ದಾಖಲೆಗಳು ಸಿಗದೆ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ.

ನೇಮಕಾತಿಗೆ ಅರ್ಜಿ ಸಲ್ಲಿಸಲು ಆಯುಷ್‌ ವೈದ್ಯರು ಹಾಗೂ ಇನ್ನಿತರ ಬೋಧಕ ವರ್ಗಕ್ಕೆ ಈಗಾಗಲೇ ವಿಳಂಬವಾಗಿ, ಸಕಾಲದಲ್ಲಿ ದಾಖಲೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಾತಿ ಹಾಗೂ ಆದಾಯದ ಆಧಾರದಲ್ಲಿ ಮೀಸಲಾತಿ ಕೋರುವವರಿಗೆ ಈ ತಾಂತ್ರಿಕ ತೊಂದರೆ ಒಂದು ಶಾಪವಾಗಿ ಪರಿಣಮಿಸಿದೆ. ಇಲಾಖೆಯು ಉದ್ಯೋಗಾಕಾಂಕ್ಷಿಗಳಿಗೆ ಅನುವಾಗುವಂತೆ ವೆಬ್‌ಸೈಟ್‌ನ ಸುಸೂತ್ರ ಕಾರ್ಯನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಬೇಕು.

ಡಾ. ಲಕ್ಷ್ಮಣ ವಿ.ಎ., ಬೆಂಗಳೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು