ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ಷರ ದಾಸೋಹ ಸಹಾಯಕ ಅಡುಗೆಯವರ ವೇತನ ಹೆಚ್ಚಿಸಿ

Last Updated 10 ಜುಲೈ 2018, 16:56 IST
ಅಕ್ಷರ ಗಾತ್ರ

ಅಕ್ಷರ ದಾಸೋಹ ಯೋಜನೆಯಡಿ ಕೆಲಸ ಮಾಡುವ ಅಡುಗೆಯವರು ನಿತ್ಯ 100 ರಿಂದ 250 ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ 48 ಸಾವಿರ ಮುಖ್ಯ ಅಡುಗೆಯವರು, 69 ಸಾವಿರ ಸಹಾಯಕ ಅಡುಗೆಯವರು ಕೆಲಸ ಮಾಡುತ್ತಿದ್ದಾರೆ.

ಇಂಥ ಕಾರ್ಮಿಕರ ಉದ್ಯೋಗ ಭದ್ರತೆಗಾಗಿ ಸರ್ಕಾರವು ಎಸ್‍ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೊಳಗೊಂಡ ಸಮಿತಿಯನ್ನು ರಚಿಸಿರುವುದು ಸ್ವಾಗತಾರ್ಹ. ಅಡುಗೆ ಕೆಲಸದವರ ಮೇಲ್ವಿಚಾರಣೆಯ ಹೊಣೆಯನ್ನು ಸಿಆರ್‌ಪಿಗೆ (ಕ್ಲಸ್ಟರ್ ರಿಸೋರ್ಸ್ ಪರ್ಸನ್) ವಹಿಸಲಾಗಿದೆ. ಇವರು ನೀಡುವ ತೀರ್ಮಾನ ತೃಪ್ತಿ ತರದಿದ್ದರೆ ಅಡುಗೆಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಬಳಿ ಹೋಗಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದಾದ ವ್ಯವಸ್ಥೆಯನ್ನೂ ಮಾಡಲಾಗಿದೆ. ಇವೆಲ್ಲವೂ ಒಳ್ಳೆಯ ಬೆಳವಣಿಗೆಗಳೇ.

ಆದರೆ ಮಕ್ಕಳಿಗೆ ದಿನನಿತ್ಯ ಬಿಸಿಯೂಟ ತಯಾರಿಸಿ ಬಡಿಸುವ ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹ 2,700 ಹಾಗೂ ಸಹಾಯಕ ಅಡುಗೆಯವರಿಗೆ ₹ 2,600 ವೇತನವನ್ನು ಮಾತ್ರ ನೀಡಲಾಗುತ್ತಿದೆ. ಈ ಸಂಬಳದಲ್ಲಿ ಜೀವನ ನಡೆಸಲು ಸಾಧ್ಯವೇ? ಸರ್ಕಾರ ಇವರಿಗೆ ಕನಿಷ್ಠ ₹ 12 ಸಾವಿರ ಸಂಬಳವನ್ನು ನಿಗದಿಗೊಳಿಸಬೇಕು.

–ಬಿ.ಜೆ. ವಿನಯಾದಿತ್ಯ, ಬಿ.ಆರ್.ಪ್ರಾಜೆಕ್ಟ್, ಭದ್ರಾವತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT