ಇಂದಿರಾ ಕ್ಯಾಂಟೀನ್‌ನಲ್ಲಿ ‘ಆರೋಗ್ಯ ಮಿತ್ರ’

ಶನಿವಾರ, ಜೂಲೈ 20, 2019
24 °C

ಇಂದಿರಾ ಕ್ಯಾಂಟೀನ್‌ನಲ್ಲಿ ‘ಆರೋಗ್ಯ ಮಿತ್ರ’

Published:
Updated:

ಇಂದಿರಾ ಕ್ಯಾಂಟೀನ್ ಯೋಜನೆಯು ಅತ್ಯಂತ ಕಡಿಮೆ ದರದಲ್ಲಿ ತಿಂಡಿ, ಊಟ ಮಾಡಲು ಎಷ್ಟೋ ಮಂದಿಗೆ ಅನುಕೂಲಕರವಾಗಿದೆ. ಪ್ರತಿದಿನ ಬೆಳಿಗ್ಗೆ ಒಂದೊಂದು ಬಗೆಯ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಅನ್ನ, ಸಾಂಬಾರ್ ಕೊಡುವ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ ‘ಆರೋಗ್ಯಮಿತ್ರ’ ರಾಗಿ ಮುದ್ದೆಯನ್ನೂ ನೀಡಲು ಬಿಬಿಎಂಪಿ ನಿರ್ಧರಿಸಿರುವುದು ಸ್ವಾಗತಾರ್ಹ.

ಇದು ರಾಜ್ಯದಲ್ಲಿ ರಾಗಿ ಬಳಸುವ ಎಲ್ಲ ಪ್ರದೇಶಗಳ ಇಂದಿರಾ ಕ್ಯಾಂಟೀನ್‌ಗಳಿಗೂ ವಿಸ್ತರಣೆಯಾಗಲಿ. ಇತ್ತೀಚಿನ ದಿನಗಳಲ್ಲಿ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ರಾಗಿ ಮುದ್ದೆ ಊಟ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದಿರಾ ಕ್ಯಾಂಟೀನ್‍ಗಳಲ್ಲಿ ಮುದ್ದೆ ಊಟ ದೊರಕಿದರೆ ಜನರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕೇಂದ್ರಗಳತ್ತ ಬರುತ್ತಾರೆ. ಹಾಗೆಯೇ ಬೆಂಬಲ ಬೆಲೆಗೆ ರಾಗಿ ಖರೀದಿಸುವುದರಿಂದ ರೈತರಿಗೂ 
ಅನುಕೂಲ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !