ಭಾನುವಾರ, ಸೆಪ್ಟೆಂಬರ್ 19, 2021
28 °C

ಬೇಡಿ ಪಡೆಯುವ ಪ್ರಶಸ್ತಿಗೆ ಬೀಳಲಿ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿದ್ದರೂ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವರು ಹೇಳಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ. ಇದೇ ರೀತಿ, ಸರ್ಕಾರದ ವತಿಯಿಂದ ನೀಡಲಾಗುವ ಎಲ್ಲ ಪ್ರಶಸ್ತಿಗಳಿಗೂ ಅರ್ಜಿ ಹಾಕುವ ಚಾಳಿ ನಿಲ್ಲಬೇಕು. ಎಲೆ ಮರೆಯ ಕಾಯಿಯಂತೆ ಅನೇಕರು ಉತ್ತಮ ಸಾಧನೆ ಮಾಡಿದ್ದಾರೆ. ಇವರು ಯಾವ ಪ್ರಶಸ್ತಿಗೂ ಅರ್ಜಿ ಹಾಕುವ ಮನಸ್ಸು ಮಾಡುವುದಿಲ್ಲ. ಇಂತಹವರನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯವಾಗಬೇಕು. ಪ್ರಶಸ್ತಿಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅವರಿವರನ್ನು ಕಾಡಿ ಬೇಡಿ ಪ್ರಶಸ್ತಿ ಪಡೆಯುವವರಿಗೆ ಕಡಿವಾಣ ಹಾಕಬೇಕು.

-ಸಾ.ಮ.ಶಿವಮಲ್ಲಯ್ಯ, ಸಾಸಲಾಪುರ, ಕನಕಪುರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು