ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಬಜೆಟ್‌: ದುಡಿಮೆಗೆ ಉತ್ತೇಜನ ಸಿಗಲಿ

ಅಕ್ಷರ ಗಾತ್ರ

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಚಿತ ಕೊಡುಗೆಗಳು ಮತ್ತು ಜನಪ್ರಿಯ ಯೋಜನೆಗಳಿಗಿಂತ ಜನರನ್ನು ಸ್ವಾವಲಂಬಿಯಾಗಿಸುವಂತಹ ಮತ್ತು ದುಡಿಮೆಗೆ ಪ್ರೋತ್ಸಾಹ ನೀಡುವಂತಹ ಯೋಜನೆಗಳನ್ನು ಪ್ರಕಟಿಸುವುದು ಒಳಿತು. ಸರ್ಕಾರದ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಉತ್ಪಾದಕತೆ ಹೆಚ್ಚಿಸಲು ನೆರವಾಗುವಂತಹ ಯೋಜನೆಗಳಿಗೆ ಅನುದಾನ ಒದಗಿಸಬೇಕು. ಯೋಜನೆಗಳ ಜಾರಿಯಲ್ಲಾಗುವ ಲೋಪವನ್ನು ಗುರುತಿಸಿ ಸರಿಪಡಿಸುವತ್ತ ಚಿತ್ತ ಹರಿಯಲಿ.

ಅಪೂರ್ಣವಾಗಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿದ ನಂತರವಷ್ಟೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌, ಶುದ್ಧ ಕುಡಿಯುವ ನೀರು, ರಸ್ತೆ ಮೊದಲಾದ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಸ್ವ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಹೆಚ್ಚುತ್ತಿರುವ ಸೈಬರ್‌ ಅಪರಾಧಗಳನ್ನು ತಡೆಗಟ್ಟಲು ಪ್ರತೀ ನಗರ, ಪಟ್ಟಣದಲ್ಲಿ ವಿಶೇಷ ತರಬೇತಿ ಹೊಂದಿದ ಸಿಬ್ಬಂದಿಯನ್ನು ಒಳಗೊಂಡ ಪ್ರತ್ಯೇಕ ತನಿಖಾ ವಿಭಾಗ ರಚಿಸಬೇಕು. ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವ ಮೂಲಕ ಭ್ರಷ್ಟಾಚಾರ ತಡೆಗೆ ದಿಟ್ಟ ಹೆಜ್ಜೆ ಇಡಬೇಕು. ಕನ್ನಡ ಪುಸ್ತಕ ಸಂಸ್ಕೃತಿಯ ಬೆಳವಣಿಗೆಗೆ ಉತ್ತೇಜನ ನೀಡಬೇಕು.

-ಉದಯ ಮ. ಯಂಡಿಗೇರಿ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT