ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಢೀರ್‌ ಅಧಿಸೂಚನೆ ಸಾಧುವಲ್ಲ

Last Updated 1 ಅಕ್ಟೋಬರ್ 2021, 19:06 IST
ಅಕ್ಷರ ಗಾತ್ರ

ಸ್ನಾತಕೋತ್ತರ ಪದವಿಯ ಶೈಕ್ಷಣಿಕ ವರ್ಷ ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ ಕೋವಿಡ್ ಪರಿಣಾಮದಿಂದಾಗಿ, ನಿಗದಿಗೊಂಡ ಪರೀಕ್ಷೆಗಳು ಮುಂದೂಡಲ್ಪಟ್ಟವು. ಇಂತಹ ಸಂದರ್ಭದಲ್ಲಿ, ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವೆಬ್‌ಸೈಟ್‌ನಲ್ಲಿ ಏಕಾಏಕಿ ಅಧಿಸೂಚನೆ ಪ್ರಕಟವಾಗಿದೆ. ಇದರಿಂದ, ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿದ್ದು, ಕೆ–ಸೆಟ್‌ ಪಾಸಾದ ಸಾವಿರಾರು ವಿದ್ಯಾರ್ಥಿಗಳು ಗೊಂದಲದೊಂದಿಗೆ ಆಘಾತ ಕ್ಕೊಳಗಾಗಿದ್ದಾರೆ. ಹಾಗಾಗಿ ಇಂತಹ ವಿದ್ಯಾರ್ಥಿಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು. ಇಲ್ಲವೇ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಫಲಿತಾಂಶ ಪ್ರಕಟವಾಗುವವರೆಗೂ ಅಧಿಸೂಚನೆಯನ್ನು ಮುಂದೂಡಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.

– ಉಮೇಶಗೌಡ ಹಳೇಮನಿ ಹಲಗೇರಿ,ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT