ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ಅಗತ್ಯ ಅರಿಯಿರಿ

Last Updated 20 ಜನವರಿ 2021, 15:59 IST
ಅಕ್ಷರ ಗಾತ್ರ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೇ 30ರಷ್ಟು ಮಾತ್ರ ಕಾಯಂ ಉಪನ್ಯಾಸಕರಿದ್ದು, ಉಳಿದ ಬಹುತೇಕ ತರಗತಿಗಳು ಅತಿಥಿ ಉಪನ್ಯಾಸಕರಿಂದಲೇ ನಡೆಯಬೇಕು. ಕೆಲವು ಕಾಲೇಜುಗಳಲ್ಲಿ ವಿಷಯವಾರು ಕಾಯಂ ಬೋಧಕರು ಇಲ್ಲದಿರುವುದರಿಂದ ಅತಿಥಿ ಉಪನ್ಯಾಸಕರೇ ತರಗತಿಗಳನ್ನು ನಿರ್ವಹಿಸುತ್ತಿದ್ದರು. ಆದರೆ ಈಗ ಅತಿಥಿ ಉಪನ್ಯಾಸಕರ ನೇಮಕ ಆಗದಿರುವುದರಿಂದ ಆ ವಿಷಯವನ್ನು ಬೋಧಿಸುವವರು ಇಲ್ಲದಂತಾಗಿದೆ.

ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಿದೆ. ಒಂದು ತಿಂಗಳೊಳಗೆ ಪರೀಕ್ಷೆ ಆರಂಭವಾಗುವುದರಿಂದ, ಪಾಠ ಕೇಳದೆ ಪರೀಕ್ಷೆ ಎದುರಿಸುವುದಾದರೂ ಹೇಗೆ ಎಂಬ ಪ್ರಶ್ನೆ ವಿದ್ಯಾರ್ಥಿಗಳನ್ನುಕಾಡುತ್ತಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು. ಜೊತೆಗೆ 10 ತಿಂಗಳಿನಿಂದ ಕೆಲಸವಿಲ್ಲದೆ ಅತಿಥಿ ಉಪನ್ಯಾಸಕರ ಜೀವನ ನಿರ್ವಹಣೆಯೂ ಕಷ್ಟವಾಗಿರುವುದನ್ನು ಮನಗಾಣಬೇಕು.

ಶಿವಕುಮಾರ್ ಯರಗಟ್ಟಿಹಳ್ಳಿ,ಚನ್ನಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT