ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುದ್ದೆ ಮೀಸಲು: ಸ್ವಾಗತಾರ್ಹ ಕ್ರಮ

ಅಕ್ಷರ ಗಾತ್ರ

ಕರ್ನಾಟಕ ನಾಗರಿಕ ಸೇವಾ ನೇಮಕಾತಿಯಲ್ಲಿ ಪ್ರತೀ ಪ್ರವರ್ಗದಿಂದಲೂ ಶೇ 1ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ‌ಆದೇಶ ಸ್ವಾಗತಾರ್ಹವಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ, ತೃತೀಯ ಲಿಂಗಿಗಳ ಬದುಕು ಸ್ವಲ್ಪಮಟ್ಟಿಗೆ ಸುಧಾರಿಸುತ್ತಿದೆ ಎನ್ನಬಹುದು. ಕರ್ನಾಟಕ ಸೇರಿದಂತೆ, ಕೆಲವು ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಅವರು ಸ್ಪರ್ಧಿಸಿದ್ದಾರೆ. ಒಂದಿಬ್ಬರು ಮೇಯರ್ ಹುದ್ದೆಯನ್ನು ಕೂಡ ಅಲಂಕರಿಸಿದ್ದಾರೆ. ಸಾಮಾಜಿಕ ಬಹಿಷ್ಕಾರದಂತಹ ಸ್ಥಿತಿ ಎದುರಿಸಬೇಕಾದ ತೃತೀಯ ಲಿಂಗಿಗಳಿಗೆ ಉದ್ಯೋಗ ಸಿಗುವುದು ಬಹಳ ಕಷ್ಟಕರ. ಹೀಗಿದ್ದರೂ ಕೆಲವು ತೃತೀಯ ಲಿಂಗಿಗಳು ಸ್ವಂತ ದುಡಿಮೆಯಿಂದ ಬದುಕುತ್ತಿರುವುದು ಸ್ವಲ್ಪಮಟ್ಟಿಗಾದರೂ ನೆಮ್ಮದಿಯ ವಿಚಾರವಾಗಿದೆ.

ಬಹುಮುಖ್ಯವಾಗಿ, ಸಮಾಜವು ತೃತೀಯ ಲಿಂಗಿಗಳನ್ನು ನೋಡುವ ದೃಷ್ಟಿಕೋನ ಬದಲಾಗಬೇಕಾಗಿದೆ. ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಅವರಿಗೆ ಉದ್ಯೋಗ ಅವಕಾಶಗಳನ್ನು ನೀಡುವತ್ತ ಗಮನ ಹರಿಸಿದರೆ, ಅವರ ಪರಿಸ್ಥಿತಿ ಮತ್ತಷ್ಟು ಸುಧಾರಿಸಬಹುದು.

– ಕೆ.ವಿ.ವಾಸು,ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT