ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್ಐಎಸ್ಎಫ್: ನೇಮಕಾತಿ ಪ್ರಕ್ರಿಯೆ ವಿಳಂಬ ಸಾಧುವಲ್ಲ

Last Updated 28 ಜುಲೈ 2019, 20:00 IST
ಅಕ್ಷರ ಗಾತ್ರ

ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಕೈಗಾರಿಕಾ ರಕ್ಷಣಾ ಪಡೆಯ (ಕೆಎಸ್ಐಎಸ್ಎಫ್) ಕಾನ್‍ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿ ವರ್ಷವಾಗಿದೆ. ಆದರೂ ಅದನ್ನು ಮುಗಿಸದೆ ವಿಳಂಬ ನೀತಿ ಅನುಸರಿಸುತ್ತಿದೆ. ಕಳೆದ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ದೇಹದಾರ್ಢ್ಯ ಪರೀಕ್ಷೆ, ಡಿಸೆಂಬರ್‌ನಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪ್ರಕ್ರಿಯೆಗಳು ಮುಗಿದು 7 ತಿಂಗಳು ಕಳೆದರೂ ಈವರೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೂ ಪ್ರಕಟಿಸಿಲ್ಲ.

ಪರೀಕ್ಷೆ ಬರೆದ ಸಹಸ್ರಾರು ಅಭ್ಯರ್ಥಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇನ್ನೂ ವಿಳಂಬ ಮಾಡಿದರೆ ವಯೋಮಿತಿ ಮೀರಿ ಹುದ್ದೆಯಿಂದ ವಂಚಿತರಾಗುವ ಭೀತಿ ಕೆಲವರನ್ನು ಕಾಡುತ್ತಿದೆ. ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದರೆ ಉದಾಸೀನದಿಂದ ಪ್ರತಿಕ್ರಿಯಿಸುತ್ತಾರೆ. ಮುಂದಿನ ತಿಂಗಳು, ಮುಂದಿನ ವಾರ ಪಟ್ಟಿ ಪ್ರಕಟವಾಗುತ್ತದೆ, ಮಾಹಿತಿ ಇಲ್ಲ ಎಂದು ಹಾರಿಕೆಯ ಉತ್ತರ ನೀಡುತ್ತಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪಗಳಾಗಿರುವ ಬಗ್ಗೆ ಈವರೆಗೆ ವರದಿಯಾಗಿಲ್ಲ. ಹಾಗಿದ್ದರೂ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಇಲಾಖೆ ಮೀನಮೇಷ ಎಣಿಸುತ್ತಿರುವುದೇಕೆ? ತಕ್ಷಣವೇ ಪಟ್ಟಿ ಪ್ರಕಟಿಸಿ, ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಮುಗಿಸಬೇಕು.

ಖಲಂದರ್‌ ಖಾನ್‌, ಎಚ್‌.ಎಸ್‌.ಮೋಹನ್‌ಕುಮಾರ್‌, ಎಚ್‌.ಇ.ರವಿ, ಷಡಕ್ಷರಿ, ಧನಂಜಯ, ಮೋಹನ್‌ ಕುಮಾರ್‌, ಎಸ್‌.ಆರ್‌.ಪುನೀತ್‌, ಚಿಕ್ಕಮಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT