ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನಿಗಮದ ಬಸ್ಸುಗಳು ನಿಯಮಕ್ಕೆ ಅತೀತವೇ?

Last Updated 19 ಸೆಪ್ಟೆಂಬರ್ 2019, 19:34 IST
ಅಕ್ಷರ ಗಾತ್ರ

ಸಂಚಾರ ನಿಯಮ ಉಲ್ಲಂಘನೆಗೆ ಕೇಂದ್ರ ಸರ್ಕಾರ ಹೆಚ್ಚಿಸಿರುವ ದಂಡದ ಮೊತ್ತಕ್ಕೆ ಬೆದರಿರುವ ವಾಹನ ಸವಾರರು, ಸಮೂಹ ಸಾರಿಗೆ ವಾಹನಗಳನ್ನು ಬಳಸುತ್ತಿದ್ದು, ಅದರಿಂದ ಬಿಎಂಟಿಸಿ ಆದಾಯ ಹೆಚ್ಚಾಗಿದೆ ಎಂದು ವರದಿಯಾಗಿದೆ. ಸ್ವಂತ ವಾಹನ ಬಳಸದೆ, ಸಾರ್ವಜನಿಕ ಸಾರಿಗೆ ಬಳಸುವುದರಿಂದ ಮಾಲಿನ್ಯ ಹಾಗೂ ಸಂಚಾರ ದಟ್ಟಣೆ ತಡೆಗಟ್ಟಬಹುದು. ಆದರೆ, ರಸ್ತೆ ಸಾರಿಗೆ ನಿಗಮಗಳ ವಾಹನಗಳು ಅನೇಕ ಸಂದರ್ಭಗಳಲ್ಲಿ ನಿಯಮಗಳಿಗೆ ಅತೀತ ಎಂಬಂತೆ ಅಡ್ಡಾದಿಡ್ಡಿ ಚಲಿಸುತ್ತವೆ. ಎಲ್ಲೆಂದರಲ್ಲಿ ನಿಲ್ಲುತ್ತವೆ. ಅದಕ್ಕೆ ಕಡಿವಾಣ ಬೇಡವೇ?

ಖಾಸಗಿ ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿದರೆ ದಂಡ ವಿಧಿಸಲಾಗುತ್ತದೆ. ಆದರೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು ತುಂಬಿ ತುಳುಕಿದರೂ ಅದು ನಿಯಮ ಉಲ್ಲಂಘನೆ ಅಲ್ಲ ಎಂಬ ಮನೋಭಾವ ಇದೆ. ಈ ತಾರತಮ್ಯ ಏಕೆ?

-ಲಕ್ಷ್ಮೀಕಾಂತರಾಜು ಎಂ.ಜಿ.,ಮಠಗ್ರಾಮ, ಗುಬ್ಬಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT