ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಷೆಯ ಕಡೆಗಣನೆ ಸಲ್ಲದು

Last Updated 17 ಜನವರಿ 2021, 18:40 IST
ಅಕ್ಷರ ಗಾತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಶನಿವಾರ ಕ್ಷಿಪ್ರ ಕಾರ್ಯಪಡೆ ಘಟಕದ ಶಂಕುಸ್ಥಾಪನೆಯನ್ನು ನೆರವೇರಿಸಿದ್ದು ಸರಿಯಷ್ಟೆ. ಆದರೆ ಶಿಲಾನ್ಯಾಸದ ಅಡಿಗಲ್ಲುಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳು ಮಾತ್ರ ಕಂಡುಬಂದಿದ್ದು ವಿಪ‍ರ್ಯಾಸ.

ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರೂ ಸೇರಿದಂತೆ ಕೇಂದ್ರ ಸಚಿವರು, ಸಂಸದರು, ಇತರ ಜನಪ್ರತಿನಿಧಿಗಳು ಭಾಗವಹಿಸಿದ್ದರು. 1962ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆ.ಎಚ್.ಪಟೇಲ್‌ ಅವರು ಶಿವಮೊಗ್ಗ ಕ್ಷೇತ್ರದಿಂದ ಪ್ರಥಮ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿ ಪ್ರಪ್ರಥಮ ಬಾರಿಗೆ ಕನ್ನಡದಲ್ಲಿ ಮಾತನಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದು ದಾಖಲೆಯಾಗಿದೆ.

ಅಲ್ಲಿಂದ ಇಲ್ಲಿಯವರೆಗೆ ರಾಜ್ಯದ ಬಹುತೇಕ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಗೃಹ ಸಚಿವರು ಪಾಲ್ಗೊಂಡಿದ್ದ ಮಹತ್ವದ ಕಾರ್ಯಕ್ರಮದಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡಿರುವುದನ್ನು ನೋಡಿದರೆ, ಭಾಷೆಗೆ ಸಂಬಂಧಿಸಿದಂತೆ ಸರ್ಕಾರಗಳ ಬದ್ಧತೆ ಯಾವ ಮಟ್ಟಕ್ಕೆ ಬಂದು ನಿಂತಿದೆ ಎಂದು ಊಹಿಸಬಹುದು.

ಅಭಿವೃದ್ಧಿ ಕಾರ್ಯಕ್ರಮಗಳ ಹೆಸರಿನಲ್ಲಿ ಪ್ರಾದೇಶಿಕ ಭಾಷೆಗಳ ಕಡೆಗಣನೆ ಸಲ್ಲದು. ರಾಜ್ಯ ಸರ್ಕಾರವೂ ಇಂತಹ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುವ ಮಟ್ಟಕ್ಕೆ ಬಂದಿರುವುದು ಅಪಾಯಕಾರಿ ಬೆಳವಣಿಗೆ. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಆಗಿರುವ ಪ್ರಮಾದವನ್ನು ಗಂಭೀರವಾಗಿ ಪರಿಗಣಿಸಿ, ಕನ್ನಡ ಭಾಷೆಯನ್ನೊಳಗೊಂಡ ಫಲಕದ ಶಿಲಾನ್ಯಾಸವನ್ನು ಹೊಸದಾಗಿ ಮಾಡಲು ಸರ್ಕಾರ ಮುತುವರ್ಜಿ ವಹಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು.

ಉಮೇಶ ಕುಮಾರ ಸೊರಟೂರು, ಶಿವಮೊಗ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT